More

    ಬೆಳಗಾವಿಗೆ ಕರೊನಾತಂಕ

    ಬೆಳಗಾವಿ: ನೆರೆಯ ಮಹಾರಾಷ್ಟ್ರ ಮತ್ತು ರಾಜಧಾನಿ ಬೆಂಗಳೂರು ನಗರದಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಈಗಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಪ್ರತಿದಿನವೂ 4,000 ಜನರ ಕೋವಿಡ್-19 ಪರೀಕ್ಷೆ ನಡೆಸಲು ಮುಂದಾಗಿದ್ದು, ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ 850ಕ್ಕೂ ಅಧಿಕ ಬೆಡ್‌ಗಳಿರುವ ಚಿಕಿತ್ಸಾ ವಾರ್ಡ್ ಸಜ್ಜುಗೊಳಿಸಿದೆ.

    ಕಳೆದ ನಾಲ್ಕೈದು ವಾರಗಳ ಅವಧಿಯಲ್ಲಿ ಬೆಳಗಾವಿ ಗಡಿಭಾಗಕ್ಕೆ ಹೊಂದಿ ಕೊಂಡಿರುವ ಮಹಾ ರಾಷ್ಟ್ರದ ಕೆಲ ಪ್ರದೇಶಗಳಲ್ಲಿ ಕರೊನಾ 2ನೇ ಅಲೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅಲ್ಲಿನ ಮುಂಬೈ, ಕೊಲ್ಲಾಪುರ, ಮಿರಜ್, ಪುಣೆ, ನಾಸಿಕ, ಸೊಲ್ಲಾಪುರ, ನಾಗಪುರ, ಪಿಂಪ್ರಿ ಸೇರಿ ವಿವಿಧ ಭಾಗಗಳಿಂದ ನಿತ್ಯವೂ ಸಹಸ್ರಾರು ಜನರು ಬೆಳಗಾವಿ ಗಡಿ ಭಾಗಗಳ ಮೂಲಕ ರಾಜ್ಯ ಪ್ರವೇಶಿಸುತ್ತಿದ್ದಾರೆ. ಹೀಗಾಗಿ. ಜಿಲ್ಲೆಯ ಜನರಿಗೆ ಮತ್ತೆ ಕರೊನಾತಂಕ ಕಾಡತೊಡಗಿದ್ದು, ಎಚ್ಚರಿಕೆ ವಹಿಸಲಾಗುತ್ತಿದೆ.\

    ಕಡ್ಡಾಯ ಪರೀಕ್ಷೆ: ಜಿಲ್ಲೆಯಲ್ಲಿ ಕರೊನಾ 2ನೇ ಅಲೆ ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮಹಾರಾಷ್ಟ್ರ, ಬೆಂಗಳೂರು ಸೇರಿ ವಿವಿಧ ಭಾಗಗಳಿಂದ ಬರುವವರ ಮೇಲೆ ನಿಗಾ ವಹಿಸುವುದರ ಜತೆಗೆ ಕೋವಿಡ್-19 ಪರೀಕ್ಷೆ ಮಾಡಲಾಗುತ್ತಿದೆ. ಚೆಕ್‌ಪೋಸ್ಟ್‌ಗಳಲ್ಲೂ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಅಲ್ಲದೆ, ನೆರೆಯ ಮಹಾರಾಷ್ಟ್ರದಿಂದ ಬರುವವರಿಗೆ ಆರ್‌ಟಿ ಪಿಸಿಆರ್ ಕಡ್ಡಾಯಗೊಳಿಸಲಾಗಿದೆ. ಜತೆಗೆ ಅಕ್ರಮ ಪ್ರವೇಶಿಸುವವರನ್ನು ತಡೆಯಲು ಬೆಳಗಾವಿ, ಖಾನಾಪುರ, ಅಥಣಿ, ನಿಪ್ಪಾಣಿ, ಕಾಗವಾಡ, ಚಿಕ್ಕೋಡಿ ತಾಲೂಕು ವ್ಯಾಪ್ತಿಯ ಗಡಿ ಭಾಗದಲ್ಲಿ ತೆರೆದಿರುವ 14 ಚೆಕ್‌ಪೋಸ್ಟ್‌ಗಳಲ್ಲಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಸಿಬ್ಬಂದಿ ನಿಯೋಜಿಸಲಾಗಿದೆ. ಕೋವಿಡ್-19 ಪರೀಕ್ಷಾ ವರದಿ ಇಲ್ಲದಿರುವ ಜನರನ್ನು ವಾಪಸ್ ಕಳುಹಿಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    ಜಿಲ್ಲೆಯ 24 ಜನರಿಗೆ ಸೋಂಕು ದೃಢ: ಬೆಳಗಾವಿ: ಜಿಲ್ಲೆಯಲ್ಲಿ ಗುರುವಾರ ಒಟ್ಟು 24 ಜನರಲ್ಲಿ ಕರೊನಾ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 27,127ಕ್ಕೆ ಏರಿಕೆಯಾಗಿದೆ. ಬೆಳಗಾವಿ ನಗರ ಹಾಗೂ ಗ್ರಾಮೀಣದಲ್ಲಿ 17 ಜನರಿಗೆ ಸೋಂಕು ತಗುಲಿದೆ. ರಾಯಬಾಗ ತಾಲೂಕಿನಲ್ಲಿ 3, ಗೋಕಾಕ 2, ಚಿಕ್ಕೋಡಿ 1 ಹಾಗೂ ಹೊರಜಿಲ್ಲೆಯ 1 ಪ್ರಕರಣ ಪತ್ತೆಯಾಗಿದೆ. ಇದುವರೆಗೆ ಒಟ್ಟು 26,645 ಕರೊನಾ ಸೋಂಕಿತರು ಗುಣಮುಖರಾಗಿದ್ದಾರೆ. 140 ಸಕ್ರಿಯ ಪ್ರಕರಣಗಳಿವೆ. 1,751 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರುವುದು ಬಾಕಿ ಇದೆ. ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ. ಸದಾಶಿವ ನಗರವನ್ನು ಮೈಕ್ರೋ ಕಂಟೇನ್‌ಮೆಂಟ್ ಪ್ರದೇಶವೆಂದು ಘೋಷಿಸಲಾಗಿದೆ.
    15,500 ರೂ. ವಸೂಲಿ: ಕರೊನಾ ನಿಯಂತ್ರಣಕ್ಕೆ ಕಠಿಣ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಡಳಿತ, ಮಾಸ್ಕ್ ಧರಿಸದೇ ನಗರದಲ್ಲಿ ಸಂಚರಿಸುತ್ತಿದ್ದ ಜನರಿಗೆ ಗುರುವಾರ ದಂಡ ಹಾಕುವ
    ಮೂಲಕ ಬಿಸಿ ಮುಟ್ಟಿಸಿದೆ. 155 ಜನರಿಗೆ ದಂಡ ಹಾಕಿರುವ ಅಧಿಕಾರಿಗಳು, 15,500 ರೂ. ವಸೂಲಿ ಮಾಡಿದ್ದಾರೆ.

    ಬೆಳಗಾವಿ: ಜಿಲ್ಲೆಯಲ್ಲಿ ಗುರುವಾರ ಒಟ್ಟು 24 ಜನರಲ್ಲಿ ಕರೊನಾ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 27,127ಕ್ಕೆ ಏರಿಕೆಯಾಗಿದೆ. ಬೆಳಗಾವಿ ನಗರ ಹಾಗೂ ಗ್ರಾಮೀಣದಲ್ಲಿ 17 ಜನರಿಗೆ ಸೋಂಕು ತಗುಲಿದೆ. ರಾಯಬಾಗ ತಾಲೂಕಿನಲ್ಲಿ 3, ಗೋಕಾಕ 2, ಚಿಕ್ಕೋಡಿ 1 ಹಾಗೂ ಹೊರಜಿಲ್ಲೆಯ 1 ಪ್ರಕರಣ ಪತ್ತೆಯಾಗಿದೆ. ಇದುವರೆಗೆ ಒಟ್ಟು 26,645 ಕರೊನಾ ಸೋಂಕಿತರು ಗುಣಮುಖರಾಗಿದ್ದಾರೆ. 140 ಸಕ್ರಿಯ ಪ್ರಕರಣಗಳಿವೆ. 1,751 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರುವುದು ಬಾಕಿ ಇದೆ. ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ. ಸದಾಶಿವ ನಗರವನ್ನು ಮೈಕ್ರೋ ಕಂಟೇನ್‌ಮೆಂಟ್ ಪ್ರದೇಶವೆಂದು ಘೋಷಿಸಲಾಗಿದೆ.
    15,500 ರೂ. ವಸೂಲಿ: ಕರೊನಾ ನಿಯಂತ್ರಣಕ್ಕೆ ಕಠಿಣ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಡಳಿತ, ಮಾಸ್ಕ್ ಧರಿಸದೇ ನಗರದಲ್ಲಿ ಸಂಚರಿಸುತ್ತಿದ್ದ ಜನರಿಗೆ ಗುರುವಾರ ದಂಡ ಹಾಕುವ
    ಮೂಲಕ ಬಿಸಿ ಮುಟ್ಟಿಸಿದೆ. 155 ಜನರಿಗೆ ದಂಡ ಹಾಕಿರುವ ಅಧಿಕಾರಿಗಳು, 15,500 ರೂ. ವಸೂಲಿ ಮಾಡಿದ್ದಾರೆ.

    ಮಾಸ್ಕ್ ಧರಿಸದಿದ್ದರೆ ದಂಡ ಫಿಕ್ಸ್: ಬೆಳಗಾವಿ ನಗರದಲ್ಲಿ ಕರೊನಾ 2ನೇ ಅಲೆ ಬಾರದಂತೆ ತಡೆಯಲು ಕೋವಿಡ್-19 ಮಾರ್ಗಸೂಚಿಗಳನ್ನು ಕಠಿಣಗೊಳಿಸಲಾಗುತ್ತಿದೆ. ಮಾ. 18ರಿಂದಲೇ ಮಾಸ್ಕ್ ಹಾಕಿಕೊಳ್ಳದೇ ಸಂಚರಿಸುವವರಿಗೆ ಹಾಗೂ ಹೋಟೆಲ್, ಸಿನಿಮಾ ಮಂದಿರ, ವ್ಯಾಪಾರ-ವಹಿವಾಟು ಪ್ರದೇಶಗಳಲ್ಲಿ ದೈಹಿಕ ಅಂತರ ಕಾಯ್ದುಕೊಳ್ಳದಿರುವವರಿಗೆ ದಂಡ ಹಾಕಿ ಬಿಸಿ ಮುಟ್ಟಿಸುವ ಕೆಲಸ ಆರಂಭಿಸಲಾಗಿದೆ. ಅಲ್ಲದೆ, ಜನರಿಗೆ ಮತ್ತೊಮ್ಮೆ ಈ ವಿಚಾರವಾಗಿ ಜಾಗೃತಿ ಮೂಡಿಸಲು ವಿಶೇಷ ತಂಡಗಳನ್ನೂ ರಚಿಸಲಾಗಿದೆ ಎಂದು ಪಾಲಿಕೆ ಆರೋಗ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ ಮಾಹಿತಿ ನೀಡಿದ್ದಾರೆ.

    ನೆರೆಯ ಮಹಾರಾಷ್ಟ್ರ ಸೇರಿ ವಿವಿಧ ಭಾಗಗಳಲ್ಲಿ ಕರೊನಾ ವೇಗವಾಗಿ ಹರಡುತ್ತಿದ್ದು, ಕರ್ನಾಟಕದಲ್ಲೂ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ, ಬೆಳಗಾವಿ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ವಹಿಸಲಾಗಿದ್ದು, ನಿತ್ಯ ಕರೊನಾ ಟೆಸ್ಟ್ ಸಂಖ್ಯೆಯನ್ನು ಗಣನೀಯವಾಗಿ ಏರಿಸಲಾಗಿದೆ. ಜಿಲ್ಲೆಯಲ್ಲಿ 178 ಲಸಿಕಾ ಕೇಂದ್ರ ತೆರೆಯಲಾಗಿದ್ದು, ಈವರೆಗೆ 90 ಸಾವಿರಕ್ಕೂ ಅಧಿಕ ಜನರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ.
    | ಡಾ. ಎಸ್.ವಿ. ಮುನ್ಯಾಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts