ರಾಯಚೂರು ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕಾಗಿ ಜಿಲ್ಲೆಯ ಕೆಲವು ತಾಲೂಕು ನಾಯಕರ ಹೆಸರುಗಳನ್ನು ಸೂಚಿನೆ ಮಾಡಲಾಗಿದ್ದು, ಒಂದು ವೇಳೆ ಅಧ್ಯಕ್ಷ ಸ್ಥಾನದ ಕರ್ತವ್ಯಗಳನ್ನು ಹಾಗೂ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸದೇ ಇದ್ದಲ್ಲಿ ಅಂತವರ ವಿರುದ್ದ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮವನ್ನೂ ಸಹ ಕೈಗೊಳ್ಳಲಾಗುವುದು ಎಂದು ನಗರ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶಿವರಾಜ ಪಾಟೀಲ್ ಹೇಳಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡ ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಗರದಲ್ಲಿರುವ ಪಕ್ಷದ ಮುಖಂಡರು, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿರುವ ನಾಯಹಾಗೂ ಮುಖಂಡರನ್ನು ಜಿಲ್ಲಾಧ್ಯಕ್ಷ ಸ್ಥಾನಕ್ಕಾಗಿ ಪರಿಗಣಿಸುವ ವಿಚಾರವಾಗಿ ಎಲ್ಲಾ ಚರ್ಚೆಗಳು ನಡೆದಿದ್ದು, ಆದರೆ ಸಭೆಯ ನಿಯಮದಂತೆ ಜಿಲ್ಲೆಯಿಂದ ಜಿಲ್ಲಾಧ್ಯಕ್ಷ ಸ್ಥಾನಕ್ಕಾಗಿ ಮೂರು ಜನರ ಹೆಸರನ್ನು ಆಯ್ಕೆ ಮಾಡಲಾಗಿದೆ. ಪಕ್ಷದ ವರಿಷ್ಠರ ತೀರ್ಮಾನ ಅಂತಿಮವಾಗಿರುತ್ತದೆ ಎಂದರು. ಪಕ್ಷದ ಪ್ರಮುಖ ನಾಯಕರು, ಮುಖಂಡರ ಸಮ್ಮುಖದಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕಾಗಿ ಮೂರು ಜನರ ಹೆಸರನ್ನು ಒಮ್ಮತದಿಂದ ತೀರ್ಮಾನಿಸಿ ರಾಜ್ಯ ಘಟಕಕ್ಕೆ ಕಳಿಸಿಕೊಡುವ ಕೆಲಸ ಮಾಡಲಾಗಿದೆ. ಇದಲ್ಲದೇ ಪಕ್ಷವನ್ನು ಬಲಿಷ್ಠವಾಗಿಸಲು ಯಾವ ಯಾವ ತೀರ್ಮಾನಗಳನ್ನು ಕೈಗೊಳ್ಳಬೇಕು. ಮುಂಬರುವ ಪಾಲಿಕೆ, ನಗರಸಭೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸಲು ಕೈಗೊಳ್ಳಬೇಕಾದ ನಿರ್ಧಾರಗಳನ್ನು ಚರ್ಚಿಸಲಾಗಿದೆ ಎಂದರು. ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯವಾಗಿದೆ.
ಪಕ್ಷದ ಚೌಕಟ್ಟಿನಲ್ಲಿ ಹೇಳಿಕೆಗಳನ್ನು ನೀಡದೇ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ಖಂಡನೀಯ. ಮುಂದಿನ ದಿನಗಳಲ್ಲಿ ಇದೇ ರೀತಿ ಮುಂದುವರೆದರೇ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ದ ಹೋರಾಟ ಮಾಬೇಕಾಗುತ್ತದೆ ಎಂದು ತಿಳಿಸಿದರು. ರಾಜ್ಯದಲ್ಲಿ ಇರುವುದು ಒಂದೇ ಬಿಜೆಪಿ ಪಕ್ಷ ಯಾವುದೇ ತಟಸ್ಥರ ತಂಡ, ಭಿನ್ನರ ತಂಡ ಎಂಬುವದಿಲ್ಲ. ಇವೆಲ್ಲವೂ ಸುಳ್ಳು. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಾಯಕತ್ವದಲ್ಲಿರುವುದು ಒಂದೇ ತಂಡ ಜನರಾಗಲಿ, ಕಾರ್ಯಕರ್ತರಾಗಿ ಯಾವುದೇ ಮತ್ತೊಂದು ತಂಡಕ್ಕೆ ಮನ್ನಣೆ ನೀಡಬಾರದು ಎಂದು ಹೇಳಿದರು. ರಾಜ್ಯ ಸರ್ಕಾರ ಜನರಿಗೆ ಮೂಲಭೂತ ಸೌಲಭ್ಯಗಳಿಗೆ ಯಾವುದೇ ಅನುದಾನ ನೀಡದೇ ಜನರಿಗೆ ಮೋಸ ಮಾಡುತ್ತಿದೆ. ಇದರಿಂದ ರಾಜ್ಯದ ಎಲ್ಲ ಶಾಸಕರಿಗೆ ಜನರ ಎದುರು ಹೋಗದ ಮುಜುಗರದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡುವ ಕುರಿತು ನಡೆಯುತ್ತಿರುವ ಹೋರಾಟ ಸಾವಿರ ದಿನಕ್ಕೆ ತಲುಪಿದ್ದು, ಏಮ್ಸ್ ಹೋರಾಟಕ್ಕೆ ಬಿಜೆಪಿ ಜಿಲ್ಲಾ ಘಟಕದ ಸಂಪೂರ್ಣ ಬೆಂಬಲವಿದೆ ಎಂದರು. ಪಕ್ಷದಿಂದ ಮಾಜಿ ಶಾಸಕರು, ಸಾಸಕರು, ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ದೆಹಲಿಗೆ ತೆರಳಿ ಕೇಂದ್ರದ ನಾಯಕರನ್ನು ಭೇಟಿ ಮಾಡಿ, ಜಿಲ್ಲೆಗೆ ಏಮ್ಸ್ ನೀಡಬೇಕೆಂಬ ಒತ್ತಾಯವನ್ನೂ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವೀಕ್ಷಕರಾದ ಬಸವರಾಜ.ಬಿ.ಮುತ್ತಿಮೂಡ, ಹಿರಿಯ ಮುಖಂಡರೂ ಹಾಗೂ ಮಾಜಿ
ಎಂಎಲ್ಸಿ ಎನ್.ಶಂಕರಪ್ಪ, ಮಾಜಿ ಶಾಸಕರಾದ ಎ.ಪಾಪಾರೆಡ್ಡಿ, ಬಸವರಾಜ ಬ್ಯಾಗವಾಟ, ಶಾಸಕ ಮಾನಪ್ಪ ವಜ್ಜಲ್, ಮಾಜಿ ಸಂಸದರಾದ ರಾಜಾ ಅಮರೇಶ್ವರ ನಾಯಕ, ಬಿ.ವಿ.ನಾಯಕ, ಮಾಜಿ ಶಾಸಕರಾದ ಕೆ.ಶಿವನಗೌಡ ನಾಯಕ, ತಿಪ್ಪರಾಜು ಹವಾಲ್ದಾರ್, ಪ್ರತಾಪಗೌಡ ಪಾಟೀಲ್, ಗಂಗಾಧರ ನಾಯಕ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಮಾನಂದ ಯಾದವ್, ಶಂಕರರೆಡ್ಡಿ ಸೇರಿ ಅನೇಕರು ಇದ್ದರು.
———–
ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional
devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…
ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿದ್ರೆ ಸಾಕು! Watermelon
Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…
ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol
Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…