ಸಮನ್ವಯದಿಂದ ಪೂರ್ವ ಸಿದ್ಧತೆ ಕೈಗೊಳ್ಳಿ

ಯಾದಗಿರಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ 21ರಂದು ಗುರುಮಠಕಲ್ ತಾಲೂಕಿನ ಚಂಡರಕಿಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದು, ಜಿಲ್ಲೆಯ ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ಟಿ.ಕೆ.ಅನಿಲಕುಮಾರ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಿಎಂ ಗ್ರಾಮ ವಾಸ್ತವ್ಯದ ಪೂರ್ವಭಾವಿ ಸಭೆ ನಡೆಸಿದ ಅವರು, ಮುಖ್ಯಮಂತ್ರಿಗಳು ನಮ್ಮ ಜಿಲ್ಲೆಯಿಂದ ಗ್ರಾಮ ವಾಸ್ತವ್ಯ ಆರಂಭಿಸುತ್ತಿರುವುದು ಹೆಮ್ಮೆ ವಿಷಯ. ಅವರ ಗ್ರಾಮ ವಾಸ್ತವ್ಯ ಒಂದು ಹಳ್ಳಿಗೆ ಮಾತ್ರ ಸೀಮಿತವಲ್ಲ. ಇಡೀ ಜಿಲ್ಲೆ ಕಾರ್ಯಕ್ರಮವನ್ನು ಒಂದು ಹಳ್ಳಿಯಲ್ಲಿ ಮಾಡುತ್ತಿದ್ದಾರೆ. ಆದ್ದರಿಂದ ಜಿಲ್ಲೆಯ ಇಲಾಖಾವಾರು ಪ್ರಗತಿ ವರದಿ ಸಿದ್ಧಪಡಿಸಿಕೊಂಡಿರಬೇಕು. ಅಂದು ಕುಡಿಯುವ ನೀರು, ವಿದ್ಯುತ್ ಸೇರಿ ಯಾವುದೇ ರೀತಿಯ ಅನನುಕೂಲವಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ನಿದರ್ೇಶನ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರ ಅಭಿಪ್ರಾಯ ಪಡೆದು ಗ್ರಾಮ ವಾಸ್ತವ್ಯಕ್ಕೆ ಅನುಕೂಲಕರವಾದ ಶಾಲೆ ಹಾಗೂ ಸಾರ್ವಜನಿಕರ ಭೇಟಿ, ಸಂವಾದ ನಡೆಸಲು ವಿಶಾಲವಾದ ಪ್ರದೇಶ ಗುರುತಿಸಬೇಕು. ಸಾರ್ವಜನಿಕರ ಅಹವಾಲು ಸ್ವೀಕರಿಸಲು ಹಾಗೂ ಸಂವಾದ ನಡೆಸಲು ಶಾಲೆಯಿಂದ ದೂರವಿರುವ ಸ್ಥಳದಲ್ಲಿ ವೇದಿಕೆ ನಿಮರ್ಿಸಬೇಕು. ಸಾರ್ವಜನಿಕರ ಅಜರ್ಿ ಸ್ವೀಕರಿಸಲು ಸಹಾಯಕ ಆಯುಕ್ತರ ನೇತೃತ್ವದಲ್ಲಿ ಅಧಿಕಾರಿ, ಸಿಬ್ಬಂದಿ ತಂಡಗಳನ್ನು ರಚಿಸಬೇಕು ಎಂದರು.

ಮುಖ್ಯಮಂತ್ರಿಗಳು ರೈತರ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ್ದು, ಕೃಷಿಗೆ ಸಂಬಂಧಿಸಿದ ಇಲಾಖೆಗಳು ಅಗತ್ಯ ಮಾಹಿತಿ ಹೊಂದಿರಬೇಕು. ಅಂದಿನ ಕಾರ್ಯಕ್ರಮದಲ್ಲಿ ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನದ ಮಾಹಿತಿ ನೀಡುವಂತಹ ನುರಿತ ತಂತ್ರಜ್ಞರನ್ನು ಆಹ್ವಾನಿಸಬೇಕು. ಚಂಡರಕಿ ಗ್ರಾಮದ ಎಲ್ಲ ಶಾಲೆಗಳ ಶೌಚಗೃಹ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಶಾಶ್ವತವಾಗಿ ಸುಧಾರಣೆ ಮಾಡಬೇಕು ಎಂದು ಸೂಚಿಸಿದರು.

ಅಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮ ಇರಲಿದೆ. ಕನಿಷ್ಠ ಐದು ಸಾವಿರ ಜನ ಬರುವ ನಿರೀಕ್ಷೆ ಇದೆ. ಆದರೂ ಜಿಲ್ಲೆಯ ತಹಸೀಲ್ದಾರರು ಕಾರ್ಯಕ್ರಮಕ್ಕೆ ಎಷ್ಟು ಜನ ಬರಬಹುದು ಎಂಬ ಬಗ್ಗೆ ಸಂಘ-ಸಂಸ್ಥೆ ಅಥವಾ ಇತರ ಮೂಲಗಳಿಂದ ಮಾಹಿತಿ ಪಡೆಯಬೇಕು. ಆಯಾ ಇಲಾಖೆಗಳಲ್ಲಿ ಕೇಂದ್ರ ಮತ್ತು ರಾಜ್ಯ ಸಕರ್ಾರಗಳ ಮಟ್ಟದಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರೆ ಬೇಡಿಕೆ ರೂಪದಲ್ಲಿ ಸಿಎಂ ಗಮನಕ್ಕೆ ತರಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಎಂ.ಕೊರ್ಮಾರಾವ್​​, ಜಿಪಂ ಸಿಇಒ ಕವಿತಾ ಎಸ್.ಮನ್ನಿಕೇರಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಜಿಪಂ ಉಪ ಕಾರ್ಯದಶರ್ಿ ಡಾ.ವಿ.ಮುನಿರಾಜು, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಜಂಟಿ ಕೃಷಿ ನಿರ್ದೇಶಕಿ ಆರ್.ದೇವಿಕಾ ಇತರರಿದ್ದರು. ಇದಕ್ಕೂ ಮೊದಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನಿಲಕುಮಾರ್ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *