More

    ಶಾಲಾ, ಕಾಲೇಜು ತೆರೆಯುವಂತಿಲ್ಲ

    ಯಾದಗಿರಿ: ಆಗಸ್ಟ್​ ಅಂತ್ಯದ ವರೆಗೂ ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳನ್ನು ಹಾಗೂ ಶೈಕ್ಷಣಿಕ, ತರಬೇತಿ ಸಂಸ್ಥೆಗಳನ್ನು ಆರಂಭಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.

    ಕೇಂದ್ರ ಸರ್ಕಾರ ಲಾಕ್ಡೌನ್ ತೆರವು-3ರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಶನಿವಾರದಿಂದ ಜಾರಿಗೆ ಬರಲಿದೆ. ಕಂಟೇನ್ಮೇಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಶಾಲೆ- ಕಾಲೇಜು, ಶೈಕ್ಷಣಿಕ ಮತ್ತು ತರಬೇತಿ ಸಂಸ್ಥೆಗಳು 31ರ ವರಗೆ ಮುಚ್ಚಲ್ಪಡುತ್ತವೆ. ಆನ್ಲೈನ್, ದೂರ ಶಿಕ್ಷಣ ಕಲಿಕೆಗಳಿಗೆ ಅನುಮತಿಸುವುದನ್ನು ಮುಂದುವರಿಸಲಾಗುವುದು ಮತ್ತು ಪ್ರೋತ್ಸಾಹಿಸಲಾಗುವುದು. ಸಿನಿಮಾ ಮಂದಿರ, ಈಜುಕೊಳ, ಮನೋರಂಜನಾ ಉದ್ಯಾನವನ, ಚಿತ್ರಮಂದಿರ, ಬಾರ್ ಮತ್ತು ಸಭಾಂಗಣಗಳನ್ನು ತೆರೆಯುವಂತಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸೂಚಿಸಿದರು.

    ಜಿಲ್ಲೆಯಲ್ಲಿ ಯೋಗ ಕೇಂದ್ರಗಳನ್ನು ತೆರೆಯಲು 5ರಿಂದ ಅನುಮತಿಸಲಾಗುವುದು. ಈ ಸಂಬಂಧ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಮತ್ತು ರಾಜ್ಯ ಆರೋಗ್ಯ ಇಲಾಖೆಯಿಂದ ಕಾರ್ಯ ವಿಧಾನ (ಎಸ್ಓಪಿ)ಯನ್ನು ಹೊರಡಿಸಲಾಗುವುದು. ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾಮರ್ಿಕ ಕಾರ್ಯಕ್ರಮಗಳು, ಸಂತೆ, ಜಾತ್ರೆಗಳು ಇತರೆ ಬೃಹತ್ ಸಭೆಗಳನ್ನು ಕಟ್ಟುನಿಟ್ಟಾಗಿ ನಿಷೆೇಧಿಸಿದೆ ಎಂದರು.

    ಕರೊನಾ ವೈರಸ್ ಪರಿಣಾಮಕಾರಿಯಾಗಿ ತಡೆಗೆ ಸಕರ್ಾರದ ಮಾರ್ಗಸೂಚಿಯಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಪಾಸಿಟಿವ್ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಪತ್ತೆ ಹಚ್ಚಿದಲ್ಲಿ ಅವರನ್ನು ಗುಣಪಡಿಸಲು ಮತ್ತು ಇತರರಿಗೆ ಹರಡುವುದನ್ನು ತಪ್ಪಿಸಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಟ್ರೂನ್ಯಾಟ್, ಆರ್ಟಿಪಿಸಿಆರ್ ಲ್ಯಾಬ್ನಲ್ಲಿ ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಲಾಗುತ್ತಿದೆ. ಅಲ್ಲದೇ, ಆರೋಗ್ಯ ಇಲಾಖೆಯಿಂದ ಸ್ಥಳದಲ್ಲಿಯೇ ಕೋವಿಡ್ ವರದಿ ನೀಡುವಂತಹ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕೂಡ ಮಾಡಲಾಗುತ್ತಿದ್ದು, ಬಾಣಂತಿಯರು, ಕರೊನಾ ಪಾಸಿಟಿವ್ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿರುವವರು, 65 ವಯಸ್ಸು ಮೇಲ್ಪಟವರು, ಗಭರ್ಿಣಿಯರು, ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕಿಡ್ನಿ ತೊಂದರೆ, ಅಸ್ತಮಾ, ಹೃದಯ ಸಮಸ್ಯೆ ಹಾಗೂ ಇನ್ನಿತರ ಮಾರಣಾಂತಿಕ ಕಾಯಿಲೆಗಳಿದ್ದವರು ಪರೀಕ್ಷೆ ಮಾಡಿಸಿಕೊಳ್ಳಲು ಕೋರಿದರು.

    ಕೋವಿಡ್-19 ನಿರ್ವಹಣೆಯ ಲಾಕ್ಡೌನ್ ಕ್ರಮಗಳನ್ನು ರಾಷ್ಟ್ರೀಯ ನಿದರ್ೇಶನ ಉಲ್ಲಂಘಿಸುವ ಯಾವುದೇ ವ್ಯಕ್ತಿಯು, ವಿಪತ್ತು ನಿರ್ವಹಣಾ ಕಾಯ್ದೆ ಅಲ್ಲದೇ ಭಾರತೀಯ ದಂಡ ಸಂಹಿತೆ ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, 15ರಂದು ಸ್ವಾತಂತ್ರೃ ದಿನಾಚರಣೆಯನ್ನು ಕೇಂದ್ರ ಸಕರ್ಾರದ ಗೃಹ ಮಂತ್ರಾಲಯವು ಹೊರಡಿಸಿರುವ ಸೂಚನೆಗಳನ್ವಯ ಆಚರಿಸಲಾಗುವುದು. ಇದಕ್ಕಾಗಿ ಪೂರ್ವಭಾವಿ ಸಭೆಯಲ್ಲಿ ಚಚರ್ೆ ನಡೆಸಿ, ಶಿಷ್ಟಾಚಾರದಂತೆ ಕಾಯಕ್ರಮ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

    ಬಕ್ರೀದ್ನಂದು ಸಾಮೂಹಿಕ ಪ್ರಾರ್ಥನೆ ಈದ್ಗಾಗಳಲ್ಲಿ ನಿರ್ವಹಿಸುವುದನ್ನು ನಿರ್ಬಂಧಿಸಲಾಗಿದೆ. ಹಬ್ಬದಂದು ಸಾಮೂಹಿಕ ಪ್ರಾರ್ಥನೆ ನಿರ್ವಹಿಸಲು ಇಚ್ಚಿಸಿದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯು ಜೂನ್ 6ರಂದು ಹೊರಡಿಸಿರುವ ಸುತ್ತೋಲೆ ಹಾಗೂ ಜುಲೈ 24ರ ಸಕರ್ಾರದ ಆದೇಶದಂತೆ ಮಸೀದಿಗಳ ಆಡಳಿತ ಮಂಡಳಿಗಳು ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಆಯಾ ಮಸೀದಿಗಳಲ್ಲಿ ಗರಿಷ್ಠ 50 ಜನರು ಮೀರದಂತೆ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಲು ಅವಕಾಶ ನೀಡಲಾಗಿದೆ.

    ಒಂದು ವೇಳೆ ಹೆಚ್ಚಿನ ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಮೂರು ಬ್ಯಾಚ್ಗಳಲ್ಲಿ ಆಯಾ ಮಸೀದಿಗಳಲ್ಲಿಯೇ ನಮಾಜ್ ನಿರ್ವಹಿಸಲು ಅವಕಾಶವಿರುತ್ತದೆ. ಮಸೀದಿಗಳನ್ನು ಹೊರತುಪಡಿಸಿ ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ ಬಕ್ರೀದ್ ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ ಎಂದು ತಿಳಿಸಿದರು.

    ಜಿಪಂ ಸಿಇಒ ಶಿಲ್ಪಾ ಶಮರ್ಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಐಎಎಸ್ ಪ್ರೊಬೇಷನರಿ ಅಧಿಕಾರಿ ಅಶ್ವಿಜಾ ಬಿ.ವಿ., ಪ್ರಭಾರಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಎಸ್.ಸೋಮನಾಳ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts