More

    ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ವರ್ಗಾವಣೆ

    ಶಿವಮೊಗ್ಗ: ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿದ್ದು ಅವರ ಜಾಗಕ್ಕೆ ಗುರುದತ್ತ ಹೆಗಡೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

    ಡಾ. ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್ ಫಾರ್ ಇ-ಗವರ್ನೆನ್ಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ.
    2022ರ ಜನವರಿಯಲ್ಲಿ ಕೆ.ಬಿ.ಶಿವಕುಮಾರ್ ವರ್ಗಾವಣೆ ಬಳಿಕ ಜಿಲ್ಲಾಧಿಕಾರಿಯಾಗಿ ಸೆಲ್ವಮಣಿ ಅಧಿಕಾರ ವಹಿಸಿಕೊಂಡಿದ್ದರು. ಎರಡು ತಿಂಗಳ ಹಿಂದೆಯೇ ವರ್ಗಾವಣೆ ವಿಷಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿತ್ತು.
    2014ರ ಬ್ಯಾಚ್‌ನ ಐಎಎಸ್ ಅಧಿಕಾರಿ ಗುರುದತ್ತ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಹೊನ್ನೆಗದ್ದೆ ಊರಿನವರು. ಪಿಯುಸಿವರೆಗೆ ಧಾರವಾಡದಲ್ಲಿ ವಿದ್ಯಾಭ್ಯಾಸ ಮುಗಿಸಿ, ಬೆಂಗಳೂರಿನ ಆರ್.ವಿ.ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. 2014ರಲ್ಲಿ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಪಾಸಾಗಿ ಐಎಎಸ್ ಅಧಿಕಾರಿಯಾಗಿದ್ದಾರೆ.
    ಬೀದರ್ ಜಿಲ್ಲೆಯಲ್ಲಿ ಪ್ರೊಬೇಷನರಿ ಅವಧಿ ಪೂರೈಸಿದ್ದಾರೆ. ಕೊಪ್ಪಳ ಉಪವಿಭಾಗಾಧಿಕಾರಿ, ಚಿಕ್ಕಬಳ್ಳಾಪುರ ಜಿಪಂ ಸಿಇಒ, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದ ಅವರು 2022ರಲ್ಲಿ ಧಾರವಾಡ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts