ಬೆಳಗಾವಿ ಜಿಲ್ಲಾಧಿಕಾರಿಯಾಗಿ ಡಾ.ವಿಶಾಲ ಅಧಿಕಾರ ಸ್ವೀಕಾರ

ಬೆಳಗಾವಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಂಸ್ಥೆಯ ಡಾ.ಆರ್.ವಿಶಾಲ ಅವರು ಮಂಗಳವಾರ ಬೆಳಗಾವಿ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

ಶನಿವಾರ (ಮಾ.30) ರಂದು ಬೆಳಗಾವಿ ನೂತನ ಜಿಲ್ಲಾಧಿಕಾರಿಯಾಗಿ ಬಾಗಲಕೋಟೆ ಜಿಲ್ಲೆಯಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಪುನರ್ ನಿರ್ಮಾಣದ ಆಯುಕ್ತ ಉಜ್ವಲ್ ಕುಮಾರ್ ಘೋಷ್ ಅಧಿಕಾರ ಸ್ವೀಕರಿಸಿದ್ದರು. ಆದರೆ, ಕೌಟುಂಬಿಕ ಕಾರಣಗಳಿಂದಾಗಿ ರಜೆ ಪಡೆದಿರುವ ಹಿನ್ನೆಲೆಯಲ್ಲಿ ಚುನಾವಣೆ ಆಯೋಗವು ಸೋಮವಾರ ಡಾ.ಆರ್.ವಿಶಾಲಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಯನ್ನಾಗಿ ನಿಯೋಜನೆ ಮಾಡಿ ರಾಜ್ಯ ಸರ್ಕಾರದ ಆಡಳಿತಾತ್ಮಕ ಇಲಾಖೆಯ ಅಧೀನ ಕಾರ್ಯದರ್ಶಿ ಶಾಂತಕುಮಾರ ಚೌಗುಲಾ ಆದೇಶ ಹೊರಡಿಸಿದರು.

ಈ ಮುಂಚೆ ಡಾ.ಆರ್.ವಿಶಾಲ ಅವರು 2004-05ನೇ ಸಾಲಿನಲ್ಲಿ ಚಿಕ್ಕೋಡಿ ಉಪ ವಿಭಾಗಾಧಿಕಾರಿಯಾಗಿ ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

Leave a Reply

Your email address will not be published. Required fields are marked *