More

    ಮಕ್ಕಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

    ಹೊಸಪೇಟೆ: ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.
    ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಜಂಟಿಯಾಗಿ ಹಮ್ಮಿಕೊಂಡಿದ್ದ ಆಕಾಶ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಕಾರ್ಯಕ್ರಮ ಶನಿವಾರ ಉದ್ಘಾಟಿಸಿದರು.

    ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದು

    ಮಕ್ಕಳಲ್ಲಿನ ಪ್ರತಿಭೆಗಳನ್ನು ಹೊರತರಲು ಇಂತಹ ಕಾರ್ಯಕ್ರಮಗಳು ಪೂರಕವಾಗಿವೆ. ಶಿಕ್ಷಕರು ನಿರ್ದೇಶಕ, ನಿರ್ಮಾಪಕ, ಸಾಹಿತಿ ಹಾಗೂ ನಾಟಕಕಾರರಾಗಿ ಮಕ್ಕಳಿಗೆ ಮಾರ್ಗದರ್ಶನ ನೀಡಬೇಕು. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಳೆದ ಬಾರಿ ಜಿಲ್ಲೆ 10ನೇ ಸ್ಥಾನ ಪಡೆದುಕೊಂಡಿದೆ. ಈ ಬಾರಿ ಮೊದಲ ಸ್ಥಾನ ತರುವಲ್ಲಿ ಎಲ್ಲರೂ ಶ್ರಮಿಸಬೇಕು ಎಂದರು.

    ಇದನ್ನೂ ಓದಿ: ಮುಂಬೈ ಇಂಡಿಯನ್ಸ್​ ತಂಡದ ನಾಯಕತ್ವ ಬದಲಾವಣೆ: ರೋಹಿತ್​ ಪತ್ನಿ ರಿತಿಕಾ ಕೊಟ್ಟ ಮೊದಲ ಪ್ರತಿಕ್ರಿಯೆ ಹೀಗಿದೆ…

    ಶಿಕ್ಷಣ ಇಲಾಖೆ ಉಪನಿರ್ದೇಶಕ ಯುವರಾಜ್‌ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ಎಪಿಸಿ ಶ್ರೀನಿವಾಸ್, ಸಹಾಯಕ ನಿರ್ದೇಶಕ ಎ.ಎನ್.ಸುಧಾಕರ್, ಪ್ರೌಢಶಾಲಾ ಮುಖ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಡಾ.ಅಕ್ಕಮಹಾದೇವಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮನೋಹರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಬಿ.ಶಿವಾನಂದ, ತಾಲೂಕಾಧ್ಯಕ್ಷ ಕೆ.ಬಸವರಾಜ, ಜಿಲ್ಲಾ ಉಪಾಧ್ಯಕ್ಷ ಎ.ಕುಬೇರ ಆಚಾರಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಕೆ.ಬಿ.ತಿಮ್ಮಪ್ಪ, ಕೂಡ್ಲಿಗಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಪಿ.ಶಿವರಾಜ್ ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts