More

    ಹಳ್ಳಿಗಳಲ್ಲಿ ಕುಡಿವ ನೀರಿನ ಸಮಸ್ಯೆ ಆಗದಿರಲಿ: ಡಿಸಿ ಎಂ.ಸುಂದರೇಶ ಬಾಬು

    ಕೊಪ್ಪಳ: ಬೇಸಿಗೆ ಆರಂಭವಾಗಿದ್ದು, ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕುಡಿವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಜಾನುವಾರುಗಳಿಗೆ ಅಗತ್ಯ ಮೇವು ಸಂಗ್ರಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು, ಅಧಿಕಾರಿಗಳಿಗೆ ಸೂಚಿಸಿದರು.


    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಚುನಾವಣೆ ನೆಪದಲ್ಲಿ ಜನರ ಸಮಸ್ಯೆಗೆ ಸ್ಪಂದಿಸದಿದ್ದಲ್ಲಿ ಜಿಲ್ಲಾಡಳಿತಕ್ಕೆ ಕೆಟ್ಟ ಹೆಸರು ಬರುತ್ತದೆ. ಯಾವುದೇ ಕಾರಣಕ್ಕೂ ಕುಡಿವ ನೀರು ಪೂರೈಕೆಯಲ್ಲಿ ನಿರ್ಲಕ್ಷೃವಹಿಸಬೇಡಿ. ಉದಾಸೀನ ಮಾಡುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಮಸ್ಯೆಗಳ ಬಗ್ಗೆ ಮಾಧ್ಯಮಗಳಲ್ಲಿ ಬರುವ ವರದಿ ಆಧರಿಸಿ ತಕ್ಷಣ ಸ್ಪಂದಿಸಬೇಕು. ತಹಸೀಲ್ದಾರ್, ತಾಪಂ ಇಒಗಳು ವಿಶೇಷ ಗಮನವಹಿಸಬೇಕು. ಗ್ರಾಮವಾರು ಅಧಿಕಾರಿಗಳಿಂದ ಪರಿಶೀಲನೆ ನಡೆಸಬೇಕು. ಶುದ್ಧ ಕುಡಿವ ನೀರಿನ ಘಟಕಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಮಾಡಬೇಕು. ನೀರಿನಮೂಲ ಖಚಿತಪಡಿಸಿಕೊಳ್ಳಬೇಕು. ಅವಶ್ಯವಿದ್ದಲ್ಲಿ ಟ್ಯಾಂಕರ್ ನೀರು ಪೂರೈಸಬೇಕು. ನಗರ ಪ್ರದೇಶಗಳಲ್ಲಿ ಬೋರ್‌ವೆಲ್‌ಗಳಲ್ಲಿನ ನೀರಿನ ಪ್ರಮಾಣವೆಷ್ಟು ? ಎಷ್ಟು ದಿನದವರೆಗೆ ನೀರು ಲಭ್ಯವಾಗಬಹುದು ಎಂಬ ಬಗ್ಗೆ ವರದಿ ಪಡೆಯಬೇಕು. ಮುಂಜಾಗ್ರತೆಯಿಂದ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದರು.


    ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಎಲ್ಲ ಗ್ರಾಪಂ ಪಿಡಿಒಗಳಿಗೆ ಕಟ್ಟುನಿಟ್ಟಾಗಿ ಸೂಚಿಸುವಂತೆ ತಾಪಂ ಇಒಗಳಿಗೆ ತಾಕೀತು ಮಾಡಿದರು. ಸಹಾಯಕ ಆಯುಕ್ತ ಬಸವಣ್ಣಪ್ಪ ಕಲಶೆಟ್ಟಿ, ಜಿಪಂ ಉಪ ಕಾರ್ಯದರ್ಶಿ ಸಮೀರ್ ಮುಲ್ಲಾ, ತಹಸೀಲ್ದಾರ್‌ಗಳು ಹಾಗೂ ತಾಪಂ ಇಒಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts