More

    ಕರೊನಾ ಭಯ ಬೇಡ ಮುಂಜಾಗೃತೆ ವಹಿಸಿ

    ಯಾದಗಿರಿ: ಮಹಾಮಾರಿ ಕರೊನಾ ವೈರಸ್ ಬಗ್ಗೆ ಯಾರು ಗಾಬರಿಪಡದೆ ಮುಂಜಾಗ್ರತೆ ವಹಿಸುವಂತೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.

    ಕರೊನಾ ವೈರಸ್ ತಡೆಗೆ ಅನುಸರಿಸಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಬುಧವಾರ ಸಂಜೆ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವೈದ್ಯಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ನೆರೆ ರಾಜ್ಯ ತೆಲಾಂಗಣದಲ್ಲಿ ಕರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ನಮ್ಮಲ್ಲಿ ಸೋಂಕಿನ ಬಗ್ಗೆ ಸುಳಿವಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದರು.

    ವೈರಸ್ ಹರಡದಂತೆ ತಡೆಗಟ್ಟಲು ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಈ ಸೋಂಕಿನ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

    ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಎಸ್.ಪಾಟೀಲ್,ಮಾತನಾಡಿ, ಜ್ವರ, ತಲೆನೋವು, ನೆಗಡಿ, ಕೆಮ್ಮು, ಮೂಗಿನಿಂದ ನೀರು ಸೋರುವಿಕೆ, ಉಸಿರಾಟ ತೊಂದರೆ, ಭೇದಿ ಮುಂತಾದವು ಕರೊನಾ ರೋಗದ ಲಕ್ಷಣಗಳು. ಈ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಬೇಗ ಹರಡುತ್ತದೆ. ಸೋಂಕಿತ ವ್ಯಕ್ತಿ ಸೀನಿದಾಗ ಮತ್ತು ಕೆಮ್ಮಿದಾಗ, ಸೋಂಕಿತ ವ್ಯಕ್ತಿ ಜತೆ ನಿಕಟ ಸಂಪರ್ಕದಲ್ಲಿದ್ದರೆ, ಹಸ್ತಲಾಘವ ಮತ್ತು ಸ್ಪರ್ಶ, ಸೋಂಕಿತರು ಬಳಸಿದ ವಸ್ತುಗಳನ್ನು ಬಳಸಿದಾಗ, ಸುರಕ್ಷಿತವಲ್ಲದ ಕೈಗಳಿಂದ ಕಣ್ಣು, ಮೂಗು, ಬಾಯಿ ಮುಟ್ಟುವುದರ ಮೂಲಕ ರೋಗವು ಮನುಷ್ಯರಿಂದ ಮನುಷ್ಯರಿಗೆ ಹಾಗೂ ಪ್ರಾಣಿಗಳಿಂದಲೂ ಮನುಷ್ಯರಿಗೆ ಹರಡುತ್ತದೆ. ರೋಗದ ಲಕ್ಷಣ ಕಂಡರೆ ತಕ್ಷಣ ವೈದ್ಯರನ್ನು ಸಂಪಕರ್ಿಸಬೇಕು ಎಂದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಾರಾಯಣಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts