ಕಡಬ ಆಡಳಿತ ಸೌಧಕ್ಕೆ ಜಿಲ್ಲಾಧಿಕಾರಿ ಭೇಟಿ

New Project (22)
Published on

ಕಡಬ: ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಕಡಬ ತಾಲೂಕು ಆಡಳಿತ ಸೌಧಕ್ಕೆ ಭೇಟಿ ಅಧಿಕಾರಿಗಳಿಂದ ತಾಲೂಕುಮಟ್ಟದ ಆಡಳಿತ್ಮಾಕ ಮಾಹಿತಿ ಪಡೆದರು.

ಅರ್ಜಿ ವಿಲೇವಾರಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಅರ್ಜಿಗಳನ್ನು ತ್ವರಿತವಾಗಿ ಸಕಾಲಕ್ಕೆ ವಿಲೇವಾರಿ ಮಾಡುವಂತೆ ಸೂಚಿಸಿದರು. ಇದೇ ವೇಳೆ ತಾಲೂಕಿಗೆ ಸಂಬಂಧಪಟ್ಟ ಹಲವಾರು ವಿಷಯಗಳ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು. ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್, ತಾಪಂ ಇಒ ನವೀನ್ ಭಂಡಾರಿ, ಕಡಬ ತಹಸೀಲ್ದಾರ್ ಪ್ರಭಾಕರ ಖಜೂರೆ ಉಪಸ್ಥಿತರಿದ್ದರು.

ಸೈಯದ್ ಮೀರಾ ಸಾಹೇಬ್‌ರಿಂದ ಮನವಿ

ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಯನ್ನು ಮಾಜಿ ಜಿಲ್ಲಾ ಪರಿಷತ್ ಸದಸ್ಯ ಸೈಯದ್ ಮೀರಾ ಸಾಹೇಬ್ ಸ್ವಾಗತಿಸಿ, ಕಡಬ ತಾಲೂಕಿನ ವಿವಿಧ ಸಮಸ್ಯೆಗಳು ಅಲ್ಲದೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 94 ಸಿ.ಸಿ. ಕಡತಗಳ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಈ ಸಮಸ್ಯೆಗಳನ್ನು ಪರಿಶೀಲಿಸಿ ಬಗೆಹರಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net