More

    ಕ್ಷಯ ರೋಗ ಪತ್ತೆಗೆ ಚಿಕಿತ್ಸಾ ಆಂದೋಲನ; ಜಿಪಂ ಸಿಇಒ

    ಕೊಪ್ಪಳ: ಕ್ಷಯರೋಗಿಗಳನ್ನು ಪತ್ತೆ ಹಚ್ಚಲು ಮತ್ತು ಚಿಕಿತ್ಸೆ ನೀಡಲು ಕ್ಷೇತ್ರ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಸೂಚಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಕ್ರಿಯ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

    ಮನೆಗಳ ಭೇಟಿ ಮೂಲಕ ವ್ಯವಸ್ಥಿತ ಸಕ್ರಿಯ ಟಿಬಿ ಪ್ರಕರಣಗಳನ್ನು ಪತ್ತೆ ಮಾಡಿ. ಪ್ರಕರಣಗಳು ಕಂಡು ಬಂದಲ್ಲಿ ತ್ವರಿತವಾಗಿ ಚಿಕಿತ್ಸೆ ಆರಂಭಿಸಿ. ಕ್ಷಯ ರೋಗ ತಡೆ ಬಗ್ಗೆ ಸಾಮೂಹಿಕ ಜಾಗೃತಿ ಮೂಡಿಸಿ. ಕೊಪ್ಪಳವನ್ನು ಕ್ಷಯ ಮುಕ್ತ ಜಿಲ್ಲೆಯಾಗಿಸೋಣ. ಗ್ರಾಮವಾರು ಅಪೌಷ್ಟಿಕ ಮಕ್ಕಳಿಗೆ ಕ್ಷಯ ಪರೀಕ್ಷೆ ಮಾಡಿಸಿ. ಹೆಚ್ಚಿನ ಸೋಂಕಿತರಿರುವ ಗ್ರಾಮ, ಪ್ರದೇಶಗಳಲ್ಲಿ ಪರೀಕ್ಷೆ ಹೆಚ್ಚಿಸಿ. ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ, ಗುಂಪು ಚರ್ಚೆ, ಕ್ಷಿಜ್ ಏರ್ಪಡಿಸಿ. ವಸತಿ ನಿಲಯಗಳಲ್ಲಿ ಮಕ್ಕಳಿಗೆ ಜಾಗೃತಿ ಕೈಗೊಳ್ಳಿ. ಕ್ಷಯ ಪತ್ತೆ ಅಭಿಯಾನಕ್ಕೆ ಎಲ್ಲ ಇಲಾಖೆ ಅಧಿಕಾರಿಗಳು ಕೈ ಜೋಡಿಸುವಂತೆ ತಿಳಿಸಿದರು.

    ಎಡಿಸಿ ಸಾವಿತ್ರಿ ಕಡಿ ಮಾತನಾಡಿ, ಕಾರ್ಮಿಕ ಸಂಘ-ಸಂಸ್ಥೆಗಳಲ್ಲಿ, ವಿವಿಧ ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ತಪ್ಪದೇ ಕ್ಷಯ ಪರೀಕ್ಷೆ ಮಾಡಿಸಿ. ರೋಗ ಇದ್ದವರಿಗೆ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಶಶಿಧರ್ ಮಾತನಾಡಿದರು. ಜು. 17ರಿಂದ ಆ.2ವರೆಗೆ ಹಮ್ಮಿಕೊಂಡ ಸಕ್ರಿಯ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಜಾಗೃತಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ಡಿಎಚ್‌ಒ ಡಾ.ಟಿ.ಲಿಂಗರಾಜು, ಕುಟುಂಬ ಕಲ್ಯಾಣಾಧಿಕಾರಿ ಡಾ.ರವಿಂದ್ರನಾಥ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ, ಆರ್.ಸಿ.ಎಚ್ ಅಧಿಕಾರಿ ಡಾ.ಪ್ರಕಾಶ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts