18 C
Bangalore
Friday, December 6, 2019

ಜಿಲ್ಲಾಧಿಕಾರಿಗಳಿಂದ ಸರ್ಕಾರಕ್ಕೆ ನೆರೆಹಾನಿಯ ವರದಿ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ವಿಜಯವಾಣಿ ಸುದ್ದಿಜಾಲ ಹಾವೇರಿ

ಅತಿವೃಷ್ಟಿ ಹಾಗೂ ನೆರೆಯಿಂದ ಬಾಧಿತವಾಗಿರುವ ಬೆಳಗಾವಿ ವಿಭಾಗದ ವಿವಿಧ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾನಿಯ ವಿವರವನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಎಂ. ದೀಪಾ ಚೋಳನ್ ತಿಳಿಸಿದರು.

ಜಿಪಂ ಉಪಾಧ್ಯಕ್ಷರ ಸ್ಥಾನದ ಚುನಾವಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ವಿಭಾಗದ ಜಿಲ್ಲೆಯಗಳ ನೆರೆ ಹಾಗೂ ಅತಿವೃಷ್ಟಿಯ ಕ್ರೂಢೀಕೃತ ಹಾನಿಯ ವರದಿ ಸಲ್ಲಿಕೆ ವ್ಯವಸ್ಥೆಯ ಬದಲಾಗಿ ಆಯಾ ಜಿಲ್ಲೆಯ ಹಾನಿಯ ವಿವರ, ನಷ್ಟದ ಮೊತ್ತ ಹಾಗೂ ಪರಿಹಾರಕ್ಕೆ ಬೇಕಾದ ಅನುದಾನವನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಈಗಾಗಲೇ ಎಲ್ಲ ಜಿಲ್ಲಾಧಿಕಾರಿಗಳು ವರದಿ ಸಲ್ಲಿಸಿದ್ದಾರೆ ಎಂದರು.

ಮಾನವ, ಜಾನುವಾರುಗಳ ಜೀವ ಹಾನಿ, ಮನೆ ಹಾನಿ, ಬೆಳೆ ಹಾನಿ, ಮೂಲ ಸೌಕರ್ಯಗಳ ಹಾನಿ ಕುರಿತ ವಿವರವನ್ನು ಆಯಾ ಜಿಲ್ಲಾಧಿಕಾರಿಗಳು ಕ್ರೂಢೀಕರಿಸಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಈಗಾಗಲೇ ಹೆಚ್ಚು ಹಾನಿಯಾದ ಜಿಲ್ಲೆಗಳಿಗೆ ಕೇಂದ್ರ ನೆರೆ ಅಧ್ಯಯನ ತಂಡ ಹೋಗಿ ಪರಿಶೀಲನೆ ನಡೆಸಿದೆ. ಎಲ್ಲ ವಿವರ ಗಳನ್ನು ತಂಡಕ್ಕೆ ಸಲ್ಲಿಸಲಾಗಿದೆ ಎಂದರು.

ಬೆಳಗಾವಿ ವಿಭಾಗದ ಬೆಳಗಾವಿ, ಬಾಗಲ ಕೋಟೆ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಹೆಚ್ಚು ಹಾನಿಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 10,900 ಕೋಟಿ ರೂ. ಬಾಗಲ ಕೋಟೆಯಲ್ಲಿ 800ರಿಂದ 900 ಕೋಟಿ ರೂ. ಧಾರವಾಡದಲ್ಲಿ 1 ಸಾವಿರ ಕೋಟಿ ರೂ. ಹಾವೇರಿ ಜಿಲ್ಲೆಯಲ್ಲಿ 780 ಕೋಟಿ ರೂ. ಹಾನಿಯಾಗಿದೆ ಎಂದರು.

ಈಗಾಗಲೇ ಸಂತ್ರಸ್ತರಿಗೆ ತುರ್ತು ಪರಿಹಾರವಾಗಿ 10 ಸಾವಿರ ರೂ.ಗಳನ್ನು ವಿತರಿಸಲಾಗಿದೆ. ಪೂರ್ಣ ಮನೆ ಹಾನಿಯಾಗಿದ್ದರೆ ಶೆಡ್ ನಿರ್ವಣಕ್ಕೆ ಸಂತ್ರಸ್ತರಿಗೆ ಅನುದಾನ ನೀಡಲಾಗುವುದು. ಇಲ್ಲವೇ ಬಾಡಿಗೆ ಮನೆಯಲ್ಲಿ ವಾಸವಾಗಲು ಇಚ್ಛಿಸಿದರೆ ತಿಂಗಳಿಗೆ 5 ಸಾವಿರ ರೂ. ಗಳನ್ನು ಹತ್ತು ತಿಂಗಳವರೆಗೆ ನೀಡಲಾಗುವುದು. ಫುಡ್​ಪ್ಯಾಕೆಟ್​ಗಳನ್ನು ಸಂತ್ರಸ್ತರಿಗೆ ನೀಡಲಾಗಿದೆ. ಮನೆ ಹಾನಿ ಹಾಗೂ ಬೆಳೆ ಪರಿಹಾರವನ್ನು ಎನ್​ಡಿಆರ್​ಎಫ್ ಮಾರ್ಗಸೂಚಿಯಂತೆ ನೀಡಲಾಗುತ್ತಿದೆ ಎಂದರು.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಉನ್ನತೀಕರಣದ ಭೂಸ್ವಾಧೀನ ವಿಳಂಬವಾಗುತ್ತಿರುವುದು ಹಾಗೂ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದೆ. ಸೇವಾರಸ್ತೆಗಳು ಅತಿವೃಷ್ಟಿ ಹಾಗೂ ನೆರೆಯಿಂದ ಹಾಳಾಗಿವೆ. ನೆರೆಯಿಂದ ತೊಂದರೆಯಾದ ಪ್ರದೇಶಗಳಲ್ಲಿ ತಾತ್ಕಾಲಿಕ ದುರಸ್ತಿ ಕಾರ್ಯ ನಡೆದಿದೆ ಎಂದರು.

ಜಿಲ್ಲಾಧಿಕಾರಿ ಕೃಷ್ಣ ಬಾಜಪೈ ಮಾತನಾಡಿ, ನಾಗನೂರನಲ್ಲಿ ನೆರೆ ಹಾವಳಿಯಿಂದ ಮನೆ ಕಳೆದುಕೊಂಡ ವರಿಗೆ ತಾತ್ಕಾಲಿಕವಾಗಿ ಪರಿಹಾರ ಕೇಂದ್ರವನ್ನು ತೆರೆದು ಶೆಡ್​ಗಳನ್ನು ನಿರ್ವಿುಸಲಾಗಿತ್ತು. ಸ್ಥಳದ ಸಮಸ್ಯೆಯಿಂದ ಶೆಡ್​ಗಳಿಗೆ ತೆರಳಲು ಸಂತ್ರಸ್ತರು ನಿರಾಕರಿಸಿರುವುದರಿಂದ ಅಪರ ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದ್ದಾರೆ. ಎಲ್ಲರೂ ಬಾಡಿಗೆ ಮನೆಯಲ್ಲಿ ಹಾಗೂ ಸಂಬಂಧಿಕರ ಮನೆಯಲ್ಲಿ ವಾಸಿಸುವುದಾಗಿ ಹೇಳಿದ್ದಾರೆ. ನಿಯಮದಂತೆ 5 ಸಾವಿರ ರೂ. ಬಾಡಿಗೆ ಹಣ ಸಂದಾಯ ಮಾಡಲಾಗುವುದು. ಎಲ್ಲರಿಗೂ ಆಹಾರ ಕಿಟ್​ಗಳನ್ನು ಸಹ ವಿತರಿಸಲಾಗಿದೆ ಎಂದರು. ಐಎಎಸ್ ಪ್ರೊಬೆಷನರಿ ಅಧಿಕಾರಿ ನೇಹಾ ಜೈನ್, ಅಪರ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ, ಸವಣೂರ ಉಪವಿಭಾಗಾಧಿಕಾರಿ ಹರ್ಷಲ್​ನಾರಾಯಣ ಬೋಯಾರ್ ಇತರರಿದ್ದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...