More

    ಗ್ಯಾರಂಟಿ ಫಲಾನುಭವಿಗಳ ಜಿಲ್ಲಾ ಸಮಾವೇಶ ಫೆ.24ಕ್ಕೆ

    ಶಿವಮೊಗ್ಗ: ನಗರದ ಹಳೇ ಜೈಲು ಮೈದಾನದಲ್ಲಿ ಫೆ.24ರಂದು ಗ್ಯಾರಂಟಿ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶ ಏರ್ಪಡಿಸಿದ್ದು, ಐದು ಯೋಜನೆಗಳ 25 ಸಾವಿರಕ್ಕೂ ಅಧಿಕ ಫಲಾನುಭವಿಗಳು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

    ಸಮಾವೇಶದ ಹಿನ್ನೆಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ತಾಲೂಕುಗಳಿಂದಲೂ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳ ಫಲಾನುಭವಿಗಳು ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದರು.
    ಸಮಾವೇಶದಲ್ಲಿ ಭಾಗವಹಿಸುವವರ ಅನುಕೂಲಕ್ಕಾಗಿ ಮಧ್ಯಾಹ್ನದ ಊಟ, ಕುಡಿಯುವ ನೀರು, ಶೌಚಗೃಹ ವ್ಯವಸ್ಥೆ ಕಲ್ಪಿಸಬೇಕು. ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದರ ಉಸ್ತುವಾರಿ ವಹಿಸಿಕೊಳ್ಳಬೇಕು. ಗ್ರಾಪಂ ಹಂತದಲ್ಲಿ ಫಲಾನುಭವಿಗಳನ್ನು ಕರೆತಂದು ಸಮಾವೇಶದ ಬಳಿಕ ಅವರನ್ನು ಸ್ವಂತ ಊರಿಗೆ ತಲುಪಿಸುವ ವ್ಯವಸ್ಥೆಯಾಗಬೇಕು ಎಂದು ಸೂಚಿಸಿದರು.
    ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿರುವವರನ್ನು ಸೌಲಭ್ಯಗಳ ಚೌಕಟ್ಟಿನೊಳಗೆ ಸೇರಿಸಲು ಅನುಕೂಲವಾಗುವಂತೆ ಸ್ಥಳದಲ್ಲೇ ಅವರ ಹೆಸರನ್ನು ನೋಂದಣಿ ಮಾಡಿಕೊಳ್ಳಲಾಗುವುದು. ಇದಕ್ಕಾಗಿ ಸಾಮಾನ್ಯ ಸೇವಾ ಕೇಂದ್ರದ ವಿವಿಧ ಕೌಂಟರ್‌ಗಳನ್ನು ತೆರೆಯಲಾಗುವುದು ಎಂದರು.
    ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಜಿಪಂ ಸಿಇಒ ಸ್ನೇಹಲ್ ಲೋಖಂಡೆ, ಎಎಸ್ಪಿ ಅನಿಲ್‌ಕುಮಾರ್ ಭೂಮರಡ್ಡಿ, ನಗರಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ, ಸೂಡಾ ಆಯುಕ್ತ ವಿಶ್ವನಾಥ ಮುದ್ದಜ್ಜಿ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts