More

    80 ಕೋಟಿ ರೂ. ಹೆಚ್ಚುವರಿ ಸಾಲ ವಿತರಣೆ

    ತರೀಕೆರೆ: ಡಿಸಿಸಿ ಬ್ಯಾಂಕ್​ನಿಂದ 80 ಕೋಟಿ ರೂ. ಹೆಚ್ಚುವರಿ ಸಾಲ ನೀಡಲಾಗಿದ್ದು, ಅಜ್ಜಂಪುರ ಮತ್ತು ತರೀಕೆರೆ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ 26 ಕೋಟಿ ರೂ. ಸಾಲ ಮಂಜೂರು ಮಾಡಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್ ತಿಳಿಸಿದರು.

    ಶನಿವಾರ ಎಂ.ಸಿ.ಹಳ್ಳಿ ಹೊಸ ಬಡಾವಣೆಯ ಗಣಪತಿ ಪೆಂಡಾಲ್​ನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ರೈತರಿಗೆ ಸಾಲದ ಚೆಕ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಎಂ.ಸಿ.ಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 1 ಕೋಟಿ ರೂ.ಗೂ ಹೆಚ್ಚು ಸಾಲ ನೀಡಿ ರೈತರ ನೆರವಿಗೆ ನಿಂತಿದೆ. ಕೃಷಿಯೇತರ ಸಾಲವೂ ಸಕಾಲದಲ್ಲಿ ವಸೂಲಿ ಮಾಡುವ ಮೂಲಕ ಅಭಿವೃದ್ಧಿ ಹೊಂದಬೇಕು. ಎಂ.ಸಿ.ಹಳ್ಳಿ ಪಿಎಸಿಎಸ್​ಗೆ 30 ಲಕ್ಷ ರೂ. ಹೊಸ ಸಾಲ ಮಂಜೂರು ಮಾಡಲಾಗಿದೆ. ಹೆಚ್ಚುವರಿ ಸಾಲ ವಿತರಣೆಗೆ ಮುಂದಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕಿದೆ. ಸಂಘದ ಸ್ವಂತ ಕಟ್ಟಡಕ್ಕೆ ಜಾಗದ ವ್ಯವಸ್ಥೆ ಮಾಡಿಸಿಕೊಡಲಾಗುವುದು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts