More

    ಬೆಳಗಾವಿಯಲ್ಲಿ‌ ವಿಜಯೋತ್ಸವ; ಮತ ಎಣಿಕೆ ಕೇಂದ್ರದ 200 ಮೀಟರ್ ಹೊರಗೆ

    ಬೆಳಗಾವಿ : ನಗರದಲ್ಲಿನ ಆರ್‌ಪಿಡಿ ಕಾಲೇಜಿನಲ್ಲಿ  ರಾಜ್ಯದಲ್ಲಿಯೇ ಅತಿ ದೊಡ್ಡ ಮತ ಏಣಿಕೆ ಕೇಂದ್ರ ಮಾಡಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಮೂರು ಹಂತದಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಗುರುತಿನ ಚೀಟಿ ಇಲ್ಲದೆ ಯಾರಿಗೂ ಒಳಗಡೆ ಬಿಡುವುದಿಲ್ಲ. ಸುಮಾರು 5 ಸಾವಿರ ಜನ ಇರುವುದರಿಂದ ಏಜೆಂಟರಿಗೂ ಗುರುತಿನ ಚೀಟಿ ನೀಡಲಾಗಿದೆ. 200 ಮೀಟರ್ ಹೊರಗಡೆ ಅಭ್ಯರ್ಥಿಗಳ ಬೆಂಬಲಿಗರು ವಿಜಯೋತ್ಸವ ಮಾಡಬಹುದು ಎಂದರು.
    ಶುಕ್ರವಾರ ನಗರದ ಆರ್‌ಪಿಡಿ ಕಾಲೇಜನಲ್ಲಿ ಸ್ಥಾಪನೆ ಮಾಡಲಾಗಿರುವ ಸ್ಟ್ರಾಂಗ್ ರೂಂ ಹಾಗೂ ಮತ ಎಣಿಕೆ ಕೇಂದ್ರದ ಸಿದ್ದತೆ ಪರಿಶೀಲನೆ ನಡೆಯಿಸಿ ಮಾತನಾಡಿದ ಅವರು, ಮೇ.13ರಂದು ಬೆಳಗ್ಗೆ 8ಗಂಟೆಗೆ 18 ವಿಧಾನಸಭಾ ಕ್ಷೇತ್ರಗಳ ಅಂಚೆ ಮತಗಳ ಎಣಿಕೆ ಮಾಡಲಾಗುವುದು. 8.30ರಿಂದ ಇವಿಎಂ ಮತ ಏಣಿಕೆ ಆರಂಭಿಸಲಾಗುವುದು. ಒಂದು ಟೇಬಲ್ ನಲ್ಲಿ 500 ಮತಗಳನ್ನು ಏಣಿಕೆ ಮಾಡಲು ಸಾಧ್ಯವಾಗುತ್ತದೆ. ಮಧ್ಯಾಹ್ನದವರೆಗೆ ಎಲ್ಲ ಫಲಿತಾಂಶ ಹೊರ ಬರುವ ಸಾಧ್ಯತೆ ಇದೆ ಎಂದರು.
    ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಮಾತನಾಡಿ, ಮೇ.13 ರಂದು ಚುನಾವಣೆಯ ಮತ ಏಣಿಕೆ ಸಂದರ್ಭದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ ನಿಯೋಜಿಸಲಾಗಿದೆ. ಮತ ಏಣಿಕೆ ಸುತ್ತ ಬೆಳಗ್ಗೆ 5ರಿಂದ ಪೊಲೀಸ್ ಸಿಬ್ಬಂದಿ ಹಾಗೂ ಕೆಎಸ್‌ಆರ್‌ಪಿ ತುಕಡಿ ಸೇರಿದಂತೆ ಸುಮಾರು 1,500 ಜನ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಲ್ಲಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts