ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಲು ಸಲಹೆ

ಯಾದಗಿರಿ: ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಡೆಂಘಿ ಚಿಕೂನ್ಗುನ್ಯಾ ರೋಗಗಳು ಬರದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಹಬೀಬ್ ಉಸ್ಮಾನ್ ಪಟೇಲ್ ಸಲಹೆ ನೀಡಿದರು.

ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಗುರುವಾರ ವಿಶ್ವ ಡೆಂಘಿ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತೀವ್ರ ಜ್ವರ, ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಹಾಗೂ ಕೀಲುಗಳಲ್ಲಿ ನೋವಾಗುವುದು. ಬಾಯಿ, ಮೂಗು ಮತ್ತು ವಸಡುಗಳಿಂದ ರಕ್ತಸ್ರಾವ ಆಗುವುದು. ಚರ್ಮದ ಮೇಲೆ ರಕ್ತಸ್ರಾವದ ಗುರುತು ಕಾಣಿಸಿಕೊಳ್ಳುವುದು ಡೆಂಘಿ ರೋಗದ ಲಕ್ಷಣಗಳಾಗಿವೆ. ಡೆಂಘಿ ರೋಗಕ್ಕೆ ಕೇವಲ ಪ್ಯಾರಾಸಿಟಮಲ್ ಮಾತ್ರೆಗಳನ್ನು ಉಪಯೋಗಿಸಬೇಕು. ಯಾವುದೇ ಕಾರಣಕ್ಕೂ ಅಸಪ್ರಿನ್, ಬ್ರೊಪ್ರೀನ್ ಮಾತ್ರೆಗಳನ್ನು ಬಳಸಬಾರದು ಎಂದು ಹೇಳಿದರು.

ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ. ಸೂರ್ಯಪ್ರಕಾಶ ಎಂ.ಕಂದಕೂರ ಮಾತನಾಡಿ, ಡೆಂಘಿ ಹಾಗೂ ಚಿಕೂನ್ಗುನ್ಯಾ ವೈರಾಣುವಿನಿಂದ ಬರುವ ರೋಗಗಳಾಗಿವೆ. ಇಂತಹ ಕಾಯಿಲೆಗಳು ಬರದಂತೆ ನೋಡಿಕೊಳ್ಳುವುದು ನಮ್ಮ ಕೈಯಲ್ಲಿದೆ. ಡೆಂಘಿ ರೋಗಕ್ಕೆ ನಿದರ್ಿಷ್ಟ ಚಿಕಿತ್ಸೆ ಅಥವಾ ಲಸಿಕೆ ಇಲ್ಲ. ಹಾಗಾಗಿ, ತೀವ್ರ ಜ್ವರ ಕಂಡುಬಂದಲ್ಲಿ ಕೂಡಲೇ ಚಿಕಿತ್ಸೆ ನೀಡಿದಲ್ಲಿ ರೋಗದಿಂದಾಗುವ ಅನಾಹುತವನ್ನು ತಪ್ಪಿಸಬಹುದು. ಚಿಕನ್ಗುನ್ಯಾ ಮಾರಣಾಂತಿಕವಲ್ಲ ಎಂದು ಹೇಳಿದರು.
ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಭಗವಂತ ಅನವಾರ, ಸಾರಿಗೆ ಸಂಸ್ಥೆ ಸಂಚಾರಿ ನಿಯಂತ್ರಣಾಧಿಕಾರಿ ಮಹಿಪಾಲ ಬೇಗಾರ, ರವಿಶಂಕರ, ತಾಲೂಕು ಆರೋಗ್ಯ ಅಧಿಕಾರಿ ಹಣಮಂತ ರೆಡ್ಡಿ ಇನ್ನಿತರರು ಇದ್ದರು

ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಭಗವಂತ ಅನವಾರ, ಸಾರಿಗೆ ಸಂಸ್ಥೆ ಸಂಚಾರಿ ನಿಯಂತ್ರಣಾಧಿಕಾರಿ ಮಹಿಪಾಲ ಬೇಗಾರ, ರವಿಶಂಕರ, ತಾಲೂಕು ಆರೋಗ್ಯ ಅಧಿಕಾರಿ ಹಣಮಂತ ರೆಡ್ಡಿ ಇನ್ನಿತರರು ಇದ್ದರು

Leave a Reply

Your email address will not be published. Required fields are marked *