More

    ಜಿಲ್ಲೆಯ ಆಯುಷ್ ಆಸ್ಪತ್ರೆ ಬಂದ್ ಎಚ್ಚರಿಕೆ

    ಹಾನಗಲ್ಲ: ಖಾಸಗಿ ಆಯುಷ್ ವೈದ್ಯರಿಗೂ ತುರ್ತು ಪರಿಸ್ಥಿತಿಯಲ್ಲಿ ಅಲೋಪಥಿ ಔಷಧ ನೀಡಲು ಅವಕಾಶ ನೀಡಬೇಕು. ಸರ್ಕಾರಿ ಆಯುಷ್ ವೈದ್ಯರ ವೇತನ ತಾರತಮ್ಯ ನಿವಾರಣೆ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ಆಯುಷ್ ವೈದ್ಯರು ತಮ್ಮ ಆಸ್ಪತ್ರೆಗಳನ್ನು ಬಂದ್ ಮಾಡಿ ಪ್ರತಿಭಟಿಸಲಿದ್ದೇವೆ ಎಂದು ಭಾರತೀಯ ಆಯುಷ್ ವೈದ್ಯರ ಒಕ್ಕೂಟದ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಸುನೀಲ ಹಿರೇಮಠ ತಿಳಿಸಿದ್ದಾರೆ.

    ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ 2 ಸಾವಿರಕ್ಕಿಂತ ಅಧಿಕ ಆಯುಷ್ ವೈದ್ಯರು ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಸರ್ಕಾರಿ ಆಯುಷ್ ವೈದ್ಯರು ಕೆಲಸ ಸ್ಥಗಿತಗೊಳಿಸಿ, ಮುಷ್ಕರ ಆರಂಭಿಸಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಕೆಲಸಕ್ಕೆ ರಾಜೀನಾಮೆಯನ್ನೂ ನೀಡಿದ್ದಾರೆ. ಆಯುಷ್ ವೈದ್ಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಗಮನ ಹರಿಸಬೇಕು. ಈಗಾಗಲೇ 20ಕ್ಕೂ ಅಧಿಕ ಆಯುಷ್ ವೈದ್ಯರಿಗೆ ಸೋಂಕು ತಗಲಿದೆ. ಉದ್ಯೋಗ ಭದ್ರತೆಯಿಲ್ಲ. ಯಾವುದೇ ವಿಮಾ ಸೌಲಭ್ಯವೂ ಇಲ್ಲ. ಆದರೂ ಕಳೆದ ನಾಲ್ಕು ತಿಂಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

    ಮುಂದಿನ ದಿನಗಳಲ್ಲಿ ಫೀವರ್ ಕ್ಲಿನಿಕ್, ಪ್ರಾಥಮಿಕ ಆರೋಗ್ಯ ಕೇಂದ್ರ, ಆಂಬುಲೆನ್ಸ್, ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಕರೊನಾ ನಿಯಂತ್ರಣ ಹಾಗೂ ಸೋಂಕಿತರ ಸೇವೆಗೆ ವೈದ್ಯರ ಕೊರತೆ ಎದುರಾಗಲಿದೆ. ಜಿಲ್ಲೆಯಲ್ಲಿಯೂ ಖಾಸಗಿ ಆಯುಷ್ ವೈದ್ಯರು ಈ ಕುರಿತು ಕಠಿಣ ನಿರ್ಧಾರ ಕೈಗೊಳ್ಳಬೇಕಿದೆ. ಈಗಾಗಲೇ ಜಿಲ್ಲಾಧಿಕಾರಿ, ಜಿಲ್ಲಾ ವೈದ್ಯಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿದೆ. ಕೋವಿಡ್-19 ಸಂದರ್ಭದಲ್ಲಿ ಆಯುಷ್ ವೈದ್ಯರು ಸೇನಾನಿಗಳಾಗಿ ಕಾರ್ಯ ನಿರ್ವಹಿಸಿದ್ದೇವೆ. ನಮ್ಮ ಬೇಡಿಕೆಯನ್ನು ಸರ್ಕಾರ ಪರಿಶೀಲಿಸಿ ಕೂಡಲೆ ಈಡೇರಿಸಬೇಕು ಎಂದು ಡಾ.ಸುನೀಲ ಹಿರೇಮಠ ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts