25.9 C
Bengaluru
Wednesday, January 22, 2020

ಅನರ್ಹರು ಎಂದು ತೀರ್ಪು ನೀಡಿದವರಿಗೆ ಉಪಚುನಾವಣೆಯಲ್ಲಿ ಮತದಾರರು ಕಪಾಳ ಮೋಕ್ಷ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಚಿಕ್ಕಮಗಳೂರು: ಸಮ್ಮಿಶ್ರ ಸರ್ಕಾರದ ಜನವಿರೋಧಿ ಆಡಳಿತ ಧಿಕ್ಕರಿಸಿ ರಾಜೀನಾಮೆ ನೀಡಿದ ಶಾಸಕರನ್ನು ಅನರ್ಹರು ಎಂದು ತೀರ್ಪು ನೀಡಿದವರಿಗೆ ಉಪಚುನಾವಣೆಯಲ್ಲಿ ಮತದಾರರು ಕಪಾಳ ಮೋಕ್ಷ ಮಾಡಿ, ಅಂದಿನ ಸ್ಪೀಕರ್ ನೀಡಿದ ತೀರ್ಪೆ ಅನರ್ಹ ಎಂಬುದನ್ನು ನಿರೂಪಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು.

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜಿಲ್ಲಾ ಬಿಜೆಪಿಯಿಂದ ಸೋಮವಾರ ಆಯೋಜಿಸಿದ್ದ ವಿಜಯೋತ್ಸವದಲ್ಲಿ ಮಾತನಾಡಿದರು.

2018ರ ಜನಾದೇಶದಲ್ಲಿ ಜೆಡಿಎಸ್ 37 ಸ್ಥಾನ ಹಾಗೂ ಬಿಜೆಪಿ 105 ಸ್ಥಾನ ಗೆದ್ದಿದ್ದು, ಅದು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ವಿರುದ್ಧದ ಜನಾದೇಶವೇ ಆಗಿತ್ತು. ಅದನ್ನು ಕಡೆಗಣಿಸಿ ಕಾಂಗ್ರೆಸ್, ಜೆಡಿಎಸ್ ಅಧಿಕಾರಕ್ಕೆ ಅಂಟಿಕೊಂಡವು. ಅಂದಿನ ಸಿಎಲ್​ಪಿ ಮುಖಂಡ ಸಿದ್ದರಾಮಯ್ಯ ಅವರಿಗೆ ಅದು ಅಪಮಾನ ಎಂದು ಅನ್ನಿಸಲೇ ಇಲ್ಲ. ಅದರ ಪರಿಣಾಮ ಕಾಂಗ್ರೆಸ್, ಜೆಡಿಎಸ್ ಶಾಸಕರು ಬೇಸತ್ತು ರಾಜೀನಾಮೆ ಕೊಟ್ಟ ಕಾರಣಕ್ಕೆ ಅಪವಿತ್ರ ಮೈತ್ರಿ ಸರ್ಕಾರ ಪತನಗೊಂಡಿತು ಎಂದರು.

ಅಂದಿನ ಸಭಾಧ್ಯಕ್ಷರು ಈ ಶಾಸಕರನ್ನು ಅನರ್ಹಗೊಳಿಸಿ ಪ್ರಜಾಪ್ರಭುತ್ವದ ವಿರೋಧಿಯಾಗಿ ನಡೆದುಕೊಂಡರು. ಆದರೆ ಸುಪ್ರೀಂ ಕೋರ್ಟ್ ಇವರೆಲ್ಲರಿಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕೊಟ್ಟಿತು. ಚುನಾವಣೆ ಕಣದಲ್ಲಿ ಪದೇಪದೆ ಈ ಶಾಸಕರನ್ನು ಅನರ್ಹರು ಎಂದು ಅಪಪ್ರಚಾರ ಮಾಡಲಾಯಿತು. ಆದರೂ ಈ ಎಲ್ಲರನ್ನು ಅರ್ಹರೆಂದು ಜನರು ಪರಿಗಣಿಸಿದ್ದಾರೆ ಎಂದು ಹೇಳಿದರು.

ಚುನಾವಣೆಯಲ್ಲಿ 12 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡರೆ ಜೆಡಿಎಸ್ ಶೂನ್ಯ ಸಂಪಾದಿಸಿದೆ. ರಾಜ್ಯದ ಜನರು ಎಡಬಿಡಂಗಿ ರಾಜಕಾರಣ ಒಪ್ಪಿಲ್ಲ. ಕಾಂಗ್ರೆಸ್ ತಿಣುಕಾಡಿ ಎರಡು ಸ್ಥಾನ ಗೆದ್ದಿದೆ. ಬಿಜೆಪಿ ಪರ ಜನರು ಅಭೂತಪೂರ್ವ ತೀರ್ಪು ನೀಡಿದ್ದಾರೆ ಎಂದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...