Tuesday, 11th December 2018  

Vijayavani

ಪಂಚರಾಜ್ಯಗಳ ಫಲಿತಾಂಶದಲ್ಲಿ ಕೈ ಆಟ-3 ರಾಜ್ಯಗಳಲ್ಲಿ ಅಧಿಕಾರದತ್ತ ಕಾಂಗ್ರೆಸ್​ - ವರ್ಕೌಟ್​ ಆಗದ ಮೋದಿ - ಅಮಿತ್ ಷಾ ಅಲೆ        ರಾಜಸ್ಥಾನದಲ್ಲಿ ಮ್ಯಾಜಿಕ್ ನಂಬರ್ ಸನಿಹ ಕಾಂಗ್ರೆಸ್-95 ಕ್ಷೇತ್ರದಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ        ಮಧ್ಯಪ್ರದೇಶದಲ್ಲಿ ಹಾವು ಏಣಿ ಆಟ - ಕೈ ಕಮಲ ಸಮಬಲದ ಹೋರಾಟ - ಸರ್ಕಾರ ರಚನೆಗೆ ಪಕ್ಷೇತರರೇ ನಿರ್ಣಾಯಕರು        ತೆಲಂಗಾಣದಲ್ಲಿ ನಡೆಯದ ಕೈ-ಕಮಲದ ಆಟ-ಶರವೇಗದಲ್ಲಿ ಮುನ್ನುಗಿದ ಕೆಸಿಆರ್​-ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ        ಛತ್ತೀಸ್​ಗಢದಲ್ಲಿ ಅಧಿಕಾರದತ್ತ ಕಾಂಗ್ರೆಸ್ - ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗ        ಮಿಜೋರಾಂನಲ್ಲಿ ಕಾಂಗ್ರೆಸ್​​​ಗೆ ಭಾರಿ ಮುಖಭಂಗ - ಅಧಿಕಾರದ ಗದ್ದುಗೆ ಹಿಡಿದ ಎಂಎನ್​​​ಎಫ್​ - 25 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ       
Breaking News

ಉಸ್ತುವಾರಿ ಪಡೆದ ಬಳಿಕ ಕೃಷ್ಣನ ದರ್ಶನಕ್ಕೆ ಬಂದ ನನ್ನ ಬಾಗಿಲಲ್ಲೇ ತಡೆಯುತ್ತೀರಾ?

Sunday, 05.08.2018, 6:44 PM       No Comments

ಉಡುಪಿ: ಉಸ್ತುವಾರಿ ಪಡೆದ ಮೇಲೆ ಮೊದಲ ಬಾರಿಗೆ ಜಿಲ್ಲೆಗೆ ಬಂದಿದ್ದೇನೆ. ಕೃಷ್ಣನ ದರ್ಶನ ಪಡೆಯಲು ಬಂದ ನನ್ನನ್ನು ಬಾಗಿಲಲ್ಲೇ ತಡೆದಿದ್ದೀರ ಎಂದು ಉಡುಪಿ ಉಸ್ತುವಾರಿ ಸಚಿವೆ ಜಯಮಾಲಾ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಉಸ್ತುವಾರಿ ಸಚಿವೆಯಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡದ ಸಂದರ್ಭದಲ್ಲಿ ಸುದ್ದಿಗಾರರು ಪ್ರಶ್ನೆ ಕೇಳಿದಾಗ ಉತ್ತರಿಸಿಲು ನಿರಾಕರಿಸಿದರು.

ಜಿಲ್ಲೆಗೆ ತನ್ನ ಆದ್ಯತೆ ಏನು ಎಂಬುದನ್ನು ಹೇಳಲು ತಡಬಡಾಯಿಸಿದ ಸಚಿವೆ ಉಡುಪಿ ನನಗೆ ಅಪರಿಚಿತವೇನಲ್ಲ. ಇಲ್ಲಿ ನಮ್ಮ ನಾಯಕರಿದ್ದಾರೆ. ಮುಂದಿನ ದಿನಗಳಲ್ಲಿ ನಾಯಕರನ್ನು ಕರೆದು ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಅಭಿಪ್ರಾಯ ಪಡೆಯಲಾಗುವುದು ಎಂದರು.

ಸರ್ಕಾರ ರೂಪಿಸಿರುವ ಯೋಜನೆಗಳನ್ನು ಜಾರಿಗೆ ತರುವೆ. ಹಾಗೆ ಎಲ್ಲ ಶಾಸಕರ ಜತೆ ಸೇರಿ‌ ಕೆಲಸ ಮಾಡುವೆ. ನಾಯಕರು, ಜನರನ್ನು ಕರೆದು ಅಭಿಪ್ರಾಯ ಪಡೆಯುವೆ. ಕಾನೂನು, ಸುವ್ಯವಸ್ಥೆ ಬಗ್ಗೆ ಪೊಲೀಸರು ಕ್ರಮಕೈಗೊಳ್ಳುತ್ತಾರೆ ಎಂದು ಗೊಂದಲದಲ್ಲಿ ಉತ್ತರ ನೀಡಿ ತೆರಳಿದ್ದಾರೆ.

ನಂತರ ನವಗ್ರಹ‌ ಕಿಂಡಿಯ ಮೂಲಕ ಶ್ರೀ ಕೃಷ್ಣನ ದರ್ಶನ ಪಡೆದು, ಮಠಕ್ಕೆ ಭೇಟಿ ನೀಡಿ ಪರ್ಯಾಯ ವಿದ್ಯಾಧೀಶ ತೀರ್ಥ ಶ್ರೀಗಳ ಆಶೀರ್ವಾದ ಪಡೆದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top