More

    ಜಿಲ್ಲಾಮಟ್ಟದ ಉದ್ಯೋಗ ಮೇಳ 22ರಿಂದ

    ಹಾವೇರಿ: ಜಿಲ್ಲಾಡಳಿತ ಮತ್ತು ಕೌಶಲಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಫೆ. 22 ಮತ್ತು 23ರಂದು ನಗರದ ಹುಕ್ಕೇರಿಮಠದ ಶಿವಲಿಂಗೇಶ್ವರ ಮಹಿಳಾ ಕಾಲೇಜ್ ಆವರಣದಲ್ಲಿ 2 ದಿನಗಳ ಜಿಲ್ಲಾಮಟ್ಟದ ಉದ್ಯೋಗ ಮೇಳ ನಡೆಯಲಿದೆ. ಜಿಲ್ಲೆಯ ಆಕಾಂಕ್ಷಿಗಳಿಗೆ ಅವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಎಲ್ಲ ಪಟ್ಟಣ ಪಂಚಾಯಿತಿ ಹಾಗೂ ತಾಲೂಕು ಕೇಂದ್ರಗಳಲ್ಲಿ ನೋಂದಣಿ ಕೌಂಟರ್​ಗಳನ್ನು ಆರಂಭಿಸಲಾಗಿದೆ.

    ಹಾವೇರಿ ಹಾಗೂ ರಾಣೆಬೆನ್ನೂರು ನಗರಸಭೆ, ಶಿಗ್ಗಾಂವಿ ಪುರಸಭೆ, ಗುತ್ತಲ ಪಟ್ಟಣ ಪಂಚಾಯಿತಿಯಲ್ಲಿ ಸೋಮವಾರದಿಂದ ನೋಂದಣಿ ಕೌಂಟರ್​ಗಳು ಕಾರ್ಯಾರಂಭಿಸಿವೆ. ಆನ್​ಲೈನ್ ಮೂಲಕ ನಿರಂತರವಾಗಿ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಈಗಾಗಲೇ ಜಿಲ್ಲಾಡಳಿತದಿಂದ https://haveriudyogamela.in ಆರಂಭಿಸಲಾಗಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ ವಿವಿಧ ಪದವಿ, ಐಟಿಐ, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್​ಗಳನ್ನು ಪೂರೈಸಿರುವ ಅಭ್ಯರ್ಥಿಗಳಿಗೂ ಉದ್ಯೋಗಾವಕಾಶಗಳು ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲ ಕೌಶಲ ಕೇಂದ್ರಗಳಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳನ್ನು ಸಹ ಆಹ್ವಾನಿಸಲಾಗಿದೆ. ಸುಮಾರು 80ರಿಂದ 100 ಉದ್ಯೋಗದಾತರ ನೀರಿಕ್ಷೆಯಿದ್ದು ಇದರಲ್ಲಿ 37 ಉದ್ಯೋಗದಾತರು 2,361 ಹುದ್ದೆಗಳು ಖಾಲಿಯಿರುವ ಕುರಿತು ವೆಬ್​ಸೈಟ್​ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಬೇರೆ ಉದ್ಯೋಗದಲ್ಲಿ ನಿರತರಾಗಿ ಕೆಲ ಅವಧಿಯಲ್ಲಿ ಪಾರ್ಟ್ ರ್ಟೆಂ ಆಗಿ ಕೆಲಸ ಮಾಡಲು ಇಚ್ಛಿಸುವವರಿಗೆ ಅಗತ್ಯವಾದ ಉದ್ಯೋಗವನ್ನು ಗುರುತಿಸಲು ಕ್ರಮವಹಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾಡಳಿತ ಭವನದ ಜಿಲ್ಲಾ ಕೌಶಲ ಮಿಷನ್ 08375-249291 ಸಂರ್ಪಸಬಹುದು.

    ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ: ನಗರದಲ್ಲಿ ಫೆ. 22ಮತ್ತು 23ರಂದು ಆಯೋಜಿಸುವ ಬೃಹತ್ ಉದ್ಯೋಗ ಮೇಳಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೈ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಉದ್ಯೋಗದಾತರಿಗೆ ಅನುಕೂಲರ ವಾತಾವರಣ ನಿರ್ವಿುಸಬೇಕು. ಉದ್ಯೋಗ ಮೇಳ ಯಶಸ್ವಿಯಾಗಲು ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಉದ್ಯೋಗ ಮೇಳದ ಕಾರ್ಯ ಚಟುವಟಿಕೆಗಳಿಗೆ ವಿವಿಧ ಸಮಿತಿಗಳನ್ನು ರಚಿಸಲು ತಿಳಿಸಿದರು.

    ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ ಅಧಿಕಾರಿ ಮಾತನಾಡಿ, ಉದ್ಯೋಗದಾತರು ಹಾಗೂ ಉದ್ಯೋಗಾಕಾಂಕ್ಷಿಗಳ ನೋಂದಣಿಗಾಗಿ ದೂರವಾಣಿ ಸಂಖ್ಯೆ 08375-249291 ಹಾಗೂ ಇ-ಮೇಲ್ [email protected] ಕಲ್ಪಿಸಲಾಗಿದೆ ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ. ಯೋಗೇಶ್ವರ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts