More

    ಜೂ.29, 30 ಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

    ಬಾಗಲಕೋಟೆ: ಬಾಗಲಕೋಟೆ ಜಿಲ್ಲಾ ರಜತ ಮಹೋತ್ಸವ, ಕರ್ನಾಟಕ ಸುವರ್ಣ ಸಂಭ್ರಮ ಹಾಗೂ ಭಾರತ ದೇಶದ ಸ್ವಾತಂತ್ರೃದ ಅಮೃತ ಮಹೋತ್ಸವ ಅಂಗವಾಗಿ 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನವನಗರದ ಡಾ.ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಜೂ.29 ಮತ್ತು 30 ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ತಿಳಿಸಿದ್ದಾರೆ.

    ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಮಖಂಡಿಯ ಹಿರಿಯ ಸಾಹಿತಿ ಡಾ.ತಾತಾಸಾಹೇಬ್ ಬಾಂಗಿ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದೆ. ಸರ್ವಾಧ್ಯಕ್ಷರ ಮೆರವಣಿಗೆ, ಉದ್ಘಾಟನೆ, ಹಾಗೂ ನಾಲ್ಕು ವಿಶೇಷ ಗೋಷ್ಠಿಗಳು, ಮೂರು ವಿಶೇಷ ಉಪನ್ಯಾಸಗಳು, ಕವಿಗೋಷ್ಠಿ, ಕಥಾಗೋಷ್ಠಿ, ಬಹಿರಂಗ ಅಧಿವೇಶನ, ಸಾಧಕರ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಮದು ತಿಳಿಸಿದ್ದಾರೆ.

    ಸಾಹಿತ್ಯ ಸಮ್ಮೇಳನವನ್ನು ಅರ್ಥ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಈ ಸಮ್ಮೇಳನ ದಾಖಲೆಯಲ್ಲಿ ಉಳಿಯುವ ನಿಟ್ಟಿನಲ್ಲಿ ರಜತಕೋಟೆ ಸ್ಮರಣ ಸಂಚಿಕೆ ಹಾಗೂ ಸಾಧಕ ಸಾಹಿತಿಗಳ ಕುರಿತು 10 ಪುಸ್ತಕಗಳು ಪ್ರಕಟಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

    ಸಭೆಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಡಾ.ಚಂದ್ರಶೇಖರ ಕಾಳನ್ನವರ, ಕೋಶಾಧ್ಯಕ್ಷ ಡಾ.ಸಿ.ಎಂ.ಜೋಶಿ, ಡಾ.ಪ್ರಕಾಶ ಖಾಡೆ, ಡಾ.ಮೈನುದ್ದೀನ್ ರೇವಡಿಗಾರ, ತಾಲೂಕು ಕಸಾಪ ಅಧ್ಯಕ್ಷ ಪಾಂಡುರಂಗ ಸಣ್ಣಪ್ಪನವರ, ಸಾಹಿತಿ ಸಂಗಮೇಶ ಬ್ಯಾಳಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts