More

    29, 30ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

    ಮೂಡಿಗೆರೆ: ಪಟ್ಟಣದ ಅಡ್ಯಂತಾಯ ರಂಗಮಂದಿರದ ಕವಿ ಲಕ್ಷ್ಮೀಶ ವೇದಿಕೆಯಲ್ಲಿ ಮಾ.29, 30ರಂದು ಹಳೇಕೋಟೆ ರಮೇಶ್ ಅಧ್ಯಕ್ಷತೆಯಲ್ಲಿ 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ನಡೆಯಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

    ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಶನಿವಾರ ಬಿಡುಗಡೆಗೊಳಿಸಿ ಮಾತನಾಡಿದ ಅವರು, 29ರ ಬೆಳಗ್ಗೆ 8 ಗಂಟೆಗೆ ರಂಗಮಂದಿರದಲ್ಲಿ ಜಿಲ್ಲಾಧಿಕಾರಿ ಡಾ. ಮೀನಾ ನಾಗರಾಜ್ ರಾಷ್ಟ್ರ ಧ್ವಜಾರೋಹಣ, ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಅವರು ಕಸಾಪ ಧ್ವಜಾರೋಹಣ ಮತ್ತು ತಾಲೂಕು ಕಸಾಪ ಅಧ್ಯಕ್ಷ ಎಚ್.ಎಂ.ಶಾಂತಕುಮಾರ್ ನಾಡಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
    ಬೆಳಗ್ಗೆ 9 ಗಂಟೆಗೆ ಚಂದನ್ ಗ್ರೂಪ್ ಮಾಲೀಕ ಕೆ.ಮಂಚೇಗೌಡ ಅವರು ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಲಿದ್ದು, 11.30ಕ್ಕೆ ಮೂಡಿಬಿದರೆ ಆಳ್ವಾಸ್ ವಿದ್ಯಾಸಂಸ್ಥೆ ಮುಖ್ಯಸ್ಥ ಡಾ. ಮೋಹನ್ ಆಳ್ವ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ನೇತೃತ್ವದಲ್ಲಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದು, ಬಳಿಕ ಸಮ್ಮೇಳನಾಧ್ಯಕ್ಷರ ನುಡಿ, ಪುಸ್ತಕಗಳನ್ನು ಬಿಡುಗಡೆಗೊಳಿಸಲಾಗುವುದು. ಮಧ್ಯಾಹ್ನ 2ಕ್ಕೆೆ ಅನ್ನದಾತರ ಅಳಲು-ಆಕ್ಷೇಪಗಳು, 4 ಗಂಟೆಗೆ ವರ್ತಮಾನದಲ್ಲಿ ಮಹಿಳೆ ವಿಚಾರಗೋಷ್ಠಿ ನಡೆಯಲಿದ್ದು, ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.
    30ರ ಬೆಳಗ್ಗೆ 10 ಗಂಟೆಗೆ ಜಾನಪದ ಪ್ರಕಾರಗಳ ಪ್ರದರ್ಶನ, ಕನ್ನಡ ಚಳವಳಿ-ಪರಿಣಾಮಗಳ ಕುರಿತು ಗೋಷ್ಠಿ, ಮಧ್ಯಾಹ 2 ಗಂಟೆಗೆ ಕವಿಗೋಷ್ಠಿ, ಸಂಜೆ 4ಕ್ಕೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಬಹಿರಂಗ ಅಧಿವೇಶನ, ನಂತರ ಸಮಾರೋಪ ಸಮಾರಂಭ ನಡೆಯಲಿದೆ. ಸಾಹಿತ್ಯ ಸಿರಿ ಪ್ರಶಸ್ತಿ, ಕನ್ನಡ ಸಿರಿ, ಸಂಘಟನಾ ಚತುರ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಚುನಾವಣಾ ನೀತಿಸಂಹಿತೆ ಇರುವುದರಿಂದ ಯಾವುದೇ ಜನಪ್ರತಿನಿಧಿಗಳು ವೇದಿಕೆಯಲ್ಲಿ ಆಸೀನರಾಗುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಿದರು.
    ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಬಿ.ಎಸ್.ಜಯರಾಂ, ಕೋಶಾಧ್ಯಕ್ಷ ಜೆ.ಎಸ್.ರಘು, ಪ್ರಧಾನ ಸಂಚಾಲಕ ಗಣೇಶ್ ಮಗ್ಗಲಮಕ್ಕಿ, ಕಸಾಪ ತಾಲೂಕು ಅಧ್ಯಕ್ಷ ಎಚ್.ಎಂ.ಶಾಂತಕುಮಾರ್, ಡಿ.ಕೆ.ಲಕ್ಷ್ಮಣ್‌ಗೌಡ, ವಿಶಾಲಾ ನಾಗರಾಜ್, ಬಕ್ಕಿ ಮಂಜು, ಸಚಿನ್, ಹಸೇನಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts