ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೊಪ್ಪಳ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್​ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪರಿಶಿಫ್ಟಿ ಜಾತಿ, ಪರಿಶಿಫ್ಟಿ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-&26ನೇ ಸಾಲಿಗೆ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

blank

ಅರ್ಜಿ ಸಲ್ಲಿಸಲು ಜೂನ್​ 16 ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಲು ಪ್ರವರ್ಗ-1, ಎಸ್​.ಸಿ. ಮತ್ತು ಎಸ್​.ಟಿ. ವಿದ್ಯಾರ್ಥಿಗಳ ಪೋಫಿಕರ ವಾರ್ಷಿಕ ಆದಾಯ ರೂ. 2.50 ಲಕ್ಷ ಮತ್ತು ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳ ಪೋಫಿಕರ ವಾರ್ಷಿಕ ಆದಾಯ ರೂ. 1ಲಕ್ಷ ಮಿತಿಯಲ್ಲಿರಬೇಕು.

ಅರ್ಜಿಯನ್ನು ಇಲಾಖೆಯ ವೆಬ್​ಸೈಟ್​ ಣಣಠಿಠ://ಠಠಿ.ಞಚಿಡಿಟಿಚಿಣಚಿಞಚಿ.ರಠತ.ಟಿ/ಛಛಿತಿಜ ನಲ್ಲಿ ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್​ಸೈಟ್​ www.bcwd.karnataka.gov.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್​ [email protected]ಮುಖಾಂತರ, ಸಹಾಯವಾಣಿ ಸಂಖ್ಯೆ: 8050770004, 8050770005 ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank