More

    ಶೋಷಿತರ ಜಾಗೃತಿ ಸಮಾವೇಶ ಯಶಸ್ವಿಗೊಳಿಸಿ, ಕೆ.ಎಂ. ರಾಮಚಂದ್ರಪ್ಪ ಕರೆ

    ಕೊಪ್ಪಳ: ಸಂವಿಧಾನ ಅಪಾಯದಲ್ಲಿದೆ. ಉಳ್ಳವರು ಶೋಷಿತರ ಮೇಲೆ ನಿರಂತರ ದಬ್ಬಾಳಿಕೆ ನಡೆಸಿ ಅವರ ಧ್ವನಿ ಹತ್ತಿಕ್ಕುತ್ತಿದ್ದಾರೆ. ಎಲ್ಲ ಶೋಷಿತ ಸಮುದಾಯಗಳು ಒಗ್ಗೂಡಿ ತಮ್ಮ ಹಕ್ಕು ಪಡೆಯಬೇಕಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಹೇಳಿದರು.

    ನಗರದ ಕಾಳಿದಾಸ ಸಮುದಾಯ ಭವನದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ

    ಒಕ್ಕೂಟದಿಂದ ಬುಧವಾರ ಹಮ್ಮಿಕೊಂಡಿದ್ದ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
    ಅವಕಾಶ ವಂಚಿತ ಜಾತಿಗಳಿಗೆ ಮೀಸಲಾತಿ ನೀಡಿ, ಸಾಮಾಜಿಕ ಸಮಾನತೆ ಸಾರಿದ ಪುಣ್ಯ ಭೂಮಿ ನಮ್ಮದು. ಹಲವು ವರ್ಗಗಳ ಆಯೋಗಗಳು ವೈಜ್ಞಾನಿಕ ಅಧ್ಯಯನ ನಡೆಸಿ ಮೀಸಲಾತಿ ಜಾರಿಗೊಳಿಸಿವೆ. ಆದರೆ, ಬಲಾಢ್ಯರು ಶೋಷಿತರ ಹಕ್ಕನ್ನು ಕಬಳಿಸುತ್ತಿರುವುದು ಶೋಚನೀಯ. ದೇಶದ ಪ್ರಧಾನಿ ಶೋಷಿತರ ಪರವಾಗಿ ನಿಲ್ಲದಿರುವುದು ದುರದೃಷ್ಟಕರ. ಸಂವಿಧಾನ ರಕ್ಷಣೆಗೆ ನಾವೆಲ್ಲರೂ ಸಂಘಟಿತರಾಗಿ ಹೋರಾಡಬೇಕಿದೆ. ಹಿಂದುಳಿದ ವರ್ಗಗಳ ಕಾಂತರಾಜ ವರದಿ ಜಾರಿಗೆ ಉಳ್ಳವರು ವಿರೋಧಿಸುತ್ತಿದ್ದಾರೆ. ಕೆಲ ಸಚಿವ, ಶಾಸಕರು ಬೆಂಬಲಿಸಿ ಜಾರಿಗೊಳಿಸದಂತೆ ಸಿಎಂ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದರು.

    ಜಿಪಂ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ಮಾತನಾಡಿ, ಜ.28ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಶೋಷಿತರ ಜಾಗೃತಿ ಸಮಾವೇಶ ದೇಶದ ಇತಿಹಾಸದ ಪುಟಗಳಲ್ಲಿ ಹೊಸ ಅಧ್ಯಾಯ ಬರೆಯಲಿದೆ. ಶೋಷಿತ, ಹಿಂದುಳಿದವರ ಬದುಕು ಹಸನವಾಗಬೇಕಾದರೆ ಎಚ್​. ಕಾಂತರಾಜ್​ ಆಯೋಗದ ವರದಿ ಅನುಷ್ಠಾನ ಅವಶ್ಯವಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಬೆಂಬಲಿಸಬೇಕಿದೆ ಎಂದು ತಿಳಿಸಿದರು.

    ಹಾಲವರ್ತಿಯ ಜಡೇಶ್ವರ ಮಠದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಶಾಸಕ ಬಸವರಾಜ ಹಿಟ್ನಾಳ, ಕುರುಬ ಸಂಘದ ರಾಜ್ಯಾಧ್ಯಕ್ಷ ಎಂ.ಈರಣ್ಣ, ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ, ಅನಂತ್​ ನಾಯಕ, ಆದರ್ಶ ಯಲ್ಲಪ್ಪ, ಕೃಷ್ಣಮೂರ್ತಿ, ವಾಲ್ಮೀಕಿ ಸಂಘದ ಜಿಲ್ಲಾಧ್ಯಕ್ಷ ಟಿ. ರತ್ನಾಕರ, ಯಮನೂರಪ್ಪ ಗೊರ್ಲೇಕೊಪ್ಪ, ಪರಶುರಾಮಪ್ಪ ಹರಪನಹಳ್ಳಿ, ನೀಲಕಂಠಪ್ಪ ಬಡಿಗೇರ, ಭರಮಪ್ಪ ನಗರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts