More

    ಕಾಂಗ್ರೆಸ್​ ವಿರುದ್ಧ ಬಿಜೆಪಿ ಪ್ರತಿಭಟನೆ

    ಕೊಪ್ಪಳ: ರಾಜ್ಯ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

    ದಲಿತರಿಗಾಗಿ ಮೀಸಲಿಟ್ಟ ಹಣವನ್ನು ಬೇರೆ ಕೆಲಸಕ್ಕೆ ದುರ್ಬಳಕೆ ಮಾಡಲಾಗಿದೆ. ಚುನಾವಣೆಯಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಾವಿರಾರು ಕೋಟಿ ರೂ. ಎಸ್ಸಿ-ಎಸ್ಟಿ ನಿಧಿ ಬಳಕೆ ಮಾಡುವ ಮೂಲಕ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ತಮ್ಮ ಸ್ವಾರ್ಥ ಸಾಧನೆಗೆ ದಲಿತರ ಅಭಿವೃದ್ಧಿ ಬಲಿ ನೀಡುತ್ತಿದ್ದಾರೆ. ದಲಿತರನ್ನು ಕೇವಲ ಮತ ಬ್ಯಾಂಕ್​ ಆಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 9 ತಿಂಗಳಾದರೂ ದಲಿತರ ಪರ ಕೆಲಸಗಳಾಗಿಲ್ಲ. ಯಾವೊಂದು ವಿಶೇಷ ಯೋಜನೆ ರೂಪಿಸುವ ಕೆಲಸವಾಗಿಲ್ಲ. ದಲಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮೀಸಲಿಟ್ಟಿದ್ದ ಹಣವನ್ನು ವರ್ಗಾವಣೆ ಮಾಡಿಕೊಂಡು ವಂಚಿಸಲಾಗಿದೆ ಎಂದು ಆರೋಪಿಸಿದರು.

    ಗ್ಯಾರಂಟಿ ಯೋಜನೆಗಳಿಗಾಗಿ ಬಡ ಮಕ್ಕಳ ಶಿಕ್ಷಣ ಬಲಿ ಕೊಡಲಾಗುತ್ತಿದೆ. ಮನಬಂದಂತೆ ವಿವಿಧ ಇಲಾಖೆಗಳ ಅನುದಾನ ಬಳಕೆ ಮಾಡಿಕೊಳ್ಳುತ್ತಿದ್ದು, ಅಭಿವೃದ್ಧಿ ಗೌಣವಾಗಿದೆ. ಅಭಿವೃದ್ಧಿ ಕೆಲಸಗಳಿಗೆ ಯಾವುದೇ ಅನುದಾನ ನೀಡುತ್ತಿಲ್ಲ. ಪ್ರಮುಖ ಯೋಜನೆಗಳಿಗೆ ಹಣಕಾಸು ನೀಡುತ್ತಿಲ್ಲ. ಇದರಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗುತ್ತಿದೆ. ರಾಜಕೀಯ ಲಾಭಕ್ಕಾಗಿ ರಾಜ್ಯದ ಜನರ ಅಭಿವೃದ್ಧಿ ಬಲಿ ನೀಡುತ್ತಿರುವುದನ್ನು ಜನರು ಸಹಿಸುವುದಿಲ್ಲ. ಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಜಿಲ್ಲಾಧ್ಯಕ್ಷ ನವೀನ ಗುಳಗಣ್ಣವರ, ವಿಭಾಗ ಸಹ ಪ್ರಭಾರಿ ಚಂದ್ರಶೇಖರ್​ ಹಲಗೇರಿ, ಜಿಲ್ಲಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಮೇಶ ನಾಡಿಗೇರ, ಸುನಿಲ ಹೇಸರೂರ, ಶಿವು ಅರಕೇರಿ, ಖಜಾಂಚಿ ನರಸಿಂಗ ರಾವ್​ ಕುಲಕರ್ಣಿ, ಪ್ರಮುಖರಾದ ಮಂಜುಳಾ ಕರಡಿ, ಮಹಾಂತೇಶ ಮೈನಳ್ಳಿ, ಕನಕಮೂರ್ತಿ ಛಲವಾದಿ, ಗಣೇಶ ಹೊರತಟ್ನಾಳ, ಲಕ್ಷ$್ಮಣ ಕಾಳಿ, ಮಹಾಲಕ್ಷಿ$್ಮ ಕಂದಾರಿ, ಪ್ರದಿಪ ಹಿಟ್ನಾಳ್​ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts