More

    ಪ್ರೋತ್ಸಾಹಧನ ಬಿಡುಗಡೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

    ಕೊಪ್ಪಳ : ಹಾಲು‌ ಉತ್ಪಾದಕರಿಗೆ ನೀಡಬೇಕಾದ ಬಾಕಿ ಪ್ರೋತ್ಸಾಹಧನ 716 ಕೋಟಿ ರೂ. ತಕ್ಷಣವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಜೆಪಿ ರೈತವಮೋರ್ಚಾ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿದರು.‌

     ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ್ ಮಾತನಾಡಿ, ಯಡಿಯೂರಪ್ಪ ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಲಾಗಿದೆ. ಇದರಿಂದ ಗ್ರಾಮೀಣ ಭಾಗದ ರೈತರು, ಮಹಿಳೆಯರ ಸ್ವಾವಬಿ ಬದುಕಿಗೆ ಅನುಕೂಲವಾಗಿದೆ‌. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಹಾಲು ಉತ್ಪಾದಕರಿಗೆ ಅನ್ಯಾಯವೆಸಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ‌ ಆರ್ಥಿಕ ವ್ಯವಸ್ಥೆ ಹದಗೆಟ್ಟಿದ್ದು ಮೊದಲು ಅದನ್ನು ಅರಿಪಡಿಸಲಿ.‌ ನಂತರ‌ ದೆಹಲಿಗೆ ಹೋಗಿ ಪ್ರತಿಭಟನೆ ಮಾಡಲಿ‌. 15 ದಿನದಲ್ಲಿ ಬಾಕಿ ಪಾವತಿಸದಿದ್ದಲ್ಲಿ ಜಾನುವಾರು ಸಮೇತ ಹೋರಾಟ ನಡೆಸಲಾಗುವದೆಂದು ಎಚ್ಚರಿಕೆ ನೀಡಿದರು.

    ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡದಿರುವುದು ಖಂಡನೀಯ.‌ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಅನುದಾನ ನೀಡುತ್ತಿಲ್ಲವೆಂದು ಆಪಾದನೆ ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಹಣಕಾಸು ಆಯೋಗ ಇದೆ. ಅದರ ಶಿಫಾರಸ್ಸಿನ ಅನಹಸಾರ ಹಣಕಾಸು ಬಿಡುಗಡೆಯಾಗುತ್ತದೆ. ಹೀಗಿದ್ದರೂ ಕೇಂದ್ರದ ಮೇಲೆ‌ ಸುಳ್ಳು ಆರೋಪ ಮಾಡುತ್ತಿದೆ ಎಂದರು.

    ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಲಂಕೇಶ‌ ಗುಳದಾಳ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿದೆ. ತನ್ನ ಕರ್ತವ್ಯ ನಿಭಾಯಿಸದೆ ಇನ್ನೊಬ್ಬರ ಮೇಲೆ ಗೂಬೆ ಕೂಡಿಸುತ್ತಿದೆ ಎಂದು ಆರೋಪಿಸಿದರು.

     ಮಂಜುಳಾ ಕರಡಿ, ಮಹಾಲಕ್ಷ್ಮಿ ಕಂದಾರಿ ಮಾತನಾಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಮೇಶ ನಾಡಗೇರ್, ಸುನೀಲ್ ಹೆಸರೂರ್, ಶಿವಕುಮಾರ್ ಅರಕೇರಿ, ಖಜಾಂಚಿ ನರಸಿಂಗರಾವ್ ಕುಲಕರ್ಣಿ, ಮಹೇಶ‌ ಅಂಗಡಿ, ಗೀತಾ ಪಾಟೀಲ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts