More

    ಮಕ್ಕಳ ಸಹಾಯವಾಣಿ ಘಟಕಕ್ಕೆ ಚಾಲನೆ

    ಕೊಪ್ಪಳ: ಜಿಲ್ಲಾ ಮಕ್ಕಳ ಸಹಾಯವಾಣಿ 1098 ಘಟಕ ನೂತನ ಕಚೇರಿಗೆ ಜಿಲ್ಲಾಧಿಕಾರಿ ನಲಿನ್ ಅತುಲ್ ಗುರುವಾರ ಚಾಲನೆ ನೀಡಿದರು.

    ಕಷ್ಟಕರ ಪರಸ್ಥಿತಿಯಲ್ಲಿರುವ, ಅಪಾಯಕ್ಕೆ ಸಿಲುಕಿರುವ, ಅಪಾಯದ ಅಂಚಿನಲ್ಲಿರುವ ಹಾಗೂ ಪೋಷಣೆ ಮತ್ತು ರಕ್ಷಣೆ ಅವಶ್ಯವಿರುವ ಮಕ್ಕಳ ರಕ್ಷಣೆಗಾಗಿ ಹಾಗೂ ತುರ್ತು ಸಹಾಯದ ತಕ್ಷಣದ ಪ್ರತಿಕ್ರಿಯೆ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಜಿಲ್ಲಾ ಮಕ್ಕಳ ಸಹಾಯವಾಣಿ ಕಾರ್ಯನಿರ್ವಹಿಸುತ್ತಿದೆ. ತಕ್ಷಣದ ತುರ್ತು ಪ್ರತಿಕ್ರಿಯೆ (ಇ.ಆರ್.ಎಸ್.ಎಸ್) ತಂತ್ರಾAಶದಲ್ಲಿ ಪ್ರಕರಣ ನಮೂದಿಸುವ ಮೂಲಕ ಡಿಸಿ ನೂತನ ಘಟಕ ಕಾರ್ಯಾರಂಭಕ್ಕೆ ಶುಭ ಕೋರಿದರು.

    ಸಹಾಯವಾಣಿಗೆ ಮಕ್ಕಳು ಕಷ್ಟದಲ್ಲಿದ್ದಾಗ ಯಾರಾದರೂ ಕರೆ ಮಾಡಿ ಮಾಹಿತಿ ನೀಡಬಹುದು. ಸದ್ಯ ಮಕ್ಕಳ ಸಹಾಯವಾಣಿ ರಾಷ್ಟಿçÃಯ ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ-112ಸಹಯೋಗದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಕರೆ ಮಾಡಿದ 60 ನಿಮಿಷದೊಳಗೆ ಸ್ಥಳಕ್ಕೆ ಅಧಿಕಾರಿ ಮತ್ತು ಸಿಬ್ಬಂದಿ ಆಗಮಿಸಿ ಅಗತ್ಯ ನೆರವು, ಸಹಕಾರ ಮತ್ತು ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ದಿನದ 24 ಘಂಟೆ ಮತ್ತು ವಾರದ 7 ದಿನಗಳು ಘಟಕ ಕಾರ್ಯನಿರ್ವಹಿಸಲಿದೆ. ತೊಂದರೆಯಲ್ಲಿರುವ ಮಕ್ಕಳು ಕಂಡುಬAದಲ್ಲಿ ತಕ್ಷಣ 1098/ 112ಗೆ ಉಚಿತ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಘಟಕದ ಸಿಬ್ಬಂದಿ ತಿಳಿಸಿದರು.

    ಎಸ್ಪಿ ಯಶೋದಾ ವಂಟಗೋಡಿ, ಎಡಿಸಿ ಸಾವಿತ್ರಿ ಕಡಿ, ಗಂಗಾವತಿ ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶ ಹಾಗೂ ಬಾಲ ನ್ಯಾಯ ಮಂಡಳಿ ಅಧ್ಯಕ್ಷ ರಮೇಶ ಗಾಣಿಗೇರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ತಿಪ್ಪಣ್ಣ ಸಿರಸಗಿ, ಡಿಎಚ್‌ಒ ಡಾ. ಲಿಂಗರಾಜ, ನಿರೂಪಣಾಧಿಕಾರಿ ಗಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅನ್ನಪೂರ್ಣ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ನಿಲೋಫರ್ ಎಸ್. ರಾಂಪುರಿ, ಯುನಿಸೆಫ್- ಮಕ್ಕಳ ರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಡಾ. ಕೆ.ರಾಘವೇಂದ್ರ ಭಟ್, ವ್ಯವಸ್ಥಾಪಕ ಹರೀಶ ಜೋಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಮಕ್ಕಳ ಸಹಾಯವಾಣಿ-1098, ಬಾಲ ಮಂದಿರಗಳ ಅಧೀಕ್ಷಕರು ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts