More

  ಕುಮಾರಸ್ವಾಮಿ ಕ್ಷಮೆ ಕೇಳಲಿ,ಕಾಂಗ್ರೆಸ್ ಪ್ರತಿಭಟನೆ

  ಕೊಪ್ಪಳ:ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆಂದು ಮಹಿಳೆಯರಿಗೆ ಅಪಮಾನ ಮಾಡಿರುವ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಬಹಿರಂಗ ಕ್ಷಮೆ ಯಾಚನೆ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್​ ಪದಾಧಿಕಾರಿಗಳು ಸೋಮವಾರ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

  ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನತೆಗೆ ಅನುಕೂಲವಾಗಿದೆ. ಎಷ್ಟೋ ಜನ ಬಡವರ ಬದುಕು ಹಸನಾಗಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಿದೆ. ಆದರೆ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ನಾಲಿಗೆ ಹರಿ ಬಿಟ್ಟು ಮಾತನಾಡಿದ್ದಾರೆ. ದಾರಿ ತಪ್ಪಿದ್ದಾರೆ ಎನ್ನುವ ಮೂಲಕ ಸ್ತ್ರೀ ಕುಲಕ್ಕೆ ಅವಮಾನ ಮಾಡಿದ್ದಾರೆ. ಅವರ ಮನೆಯಲ್ಲೂ ಹೆಣ್ಣುಮಕ್ಕಳಿದ್ದಾರೆ ಎಂಬುದನ್ನು ಮರೆತು ಹಿಯಾಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಜನರು ಕಾಂಗ್ರೆಸ್​ನತ್ತ ಒಲವು ಹೊಂದಿದ್ದಾರೆ. ಇದರಿಂದ ವಿಚಲಿತರಾದ ವಿಪಕ್ಷದವರು ಹೀಗೆಲ್ಲ ಮಾತನಾಡುತ್ತಿದ್ದಾರೆ. ರಾಜಕೀಯವಾಗಿ ಏನಾದರೂ ಮಾತನಾಡಿಕೊಳ್ಳಲಿ. ಆದರೆ, ಮಹಿಳೆಯರ ಬಗ್ಗೆ ಮಾತನಾಡುವಾಗ ಅರಿವಿರಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

  ಮಾಜಿ ಶಾಸಕ ಸಂಜಯ್​ ಪಾಟೀಲ್​ ಸಹ ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ. ಇದನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ. ತಕ್ಷಣ ತಮ್ಮ ಮಾತನ್ನು ವಾಪಸ್​ ಪಡೆದು ರಾಜ್ಯದ ಜನರ ಬಳಿ ಬಹಿರಂಗವಾಗಿ ಕುಮಾರಸ್ವಾಮಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಜನತೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

  ಕೆಪಿಸಿಸಿ ವಕ್ತಾರೆ ಶೈಲಜಾ ಹಿರೇಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಗೊಂಡಬಾಳ ಮಾತನಾಡಿದರು. ಪ್ರಮುಖರಾದ ರೇಷ್ಮಾಬೇಗಂ, ಸಾವಿತ್ರಿ ಮುಜುಂದಾರ, ಸವಿತಾ ಗೋರಂಟ್ಲಿ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts