More

    ಕೊಪ್ಪಳದ ಶಾಲಾ-ಕಾಲೇಜುಗಳಲ್ಲಿ ಸ್ಕೌಟ್ಸ್, ಗೈಡ್ಸ್ ಘಟಕ ಆರಂಭಿಸಲು ಡಿಸಿ ಸೂಚನೆ

    ಕೊಪ್ಪಳ: ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್​ ಮತ್ತು ಗೈಡ್ಸ್​ ಘಟಕ ಆರಂಭಿಸಿ. ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸೂಚಿಸಿ ಎಂದು ಜಿಲ್ಲಾಧಿಕಾರಿ ನಲಿನ್​ ಅತುಲ್​ ಹೇಳಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಭಾರತ್​ ಸ್ಕೌಟ್ಸ್​ ಮತ್ತು ಗೈಡ್ಸ್​ನ ಜಿಲ್ಲಾ ಸಂಸ್ಥೆಯ ಜಿಲ್ಲಾ ಕೌನ್ಸಿಲ್​ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸ್ಕೌಟ್ಸ್​ ಮತ್ತು ಗೈಡ್ಸ್​ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪಾಲನೆ ಕಲಿಸುತ್ತದೆ. ಜಿಲ್ಲೆಯ ಎಲ್ಲ ಶಾಲಾ&ಕಾಲೇಜುಗಳಲ್ಲಿ ಸ್ಕೌಟ್ಸ್​ ಮತ್ತು ಗೈಡ್ಸ್​ ಘಟಕಗಳು ಕಡ್ಡಾಯವಾಗಿ ಇರಲಿ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು.

    ಪ್ರಮುಖ ಸಂದರ್ಭಗಳಲ್ಲಿ ಸ್ಕೌಟ್ಸ್​ ಮತ್ತು ಗೈಡ್ಸ್​ ಅಭ್ಯರ್ಥಿಗಳು ಸ್ವಯಂ ಪ್ರೇರಿತವಾಗಿ ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕು. ಜಿಲ್ಲಾ ಸಂಸ್ಥೆಯಿಂದ ಆಸಕ್ತ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ, ಸಮವಸ್ತ್ರ ಒದಗಿಸಿ. ಔಪಚಾರಿಕ ಶಿಕ್ಷಣದೊಂದಿಗೆ ಬದುಕಿನ ಶಿಸ್ತು ಕಲಿಸಲು ಕ್ರಮವಹಿಸುವಂತೆ ನಿರ್ದೇಶಿಸಿದರು.

    ಜಿಲ್ಲಾ ಪ್ರಧಾನ ಆಯುಕ್ತ ಎಚ್​.ಎಂ.ಸಿದ್ದರಾಮಸ್ವಾಮಿ ಮಾತನಾಡಿ, 2022-23ನೇ ಸಾಲಿನ ಚಟುವಟಿಕೆಗಳ ವರದಿ, ಲೆಕ್ಕಪತ್ರಗಳ ವರದಿ, ಸ್ಕೌಟ್ಸ್​ ಮತ್ತು ಗೈಡ್ಸ್​ ಜಿಲ್ಲಾ ತರಬೇತಿ ಕೇಂದ್ರದ ಅಭಿವೃದ್ದಿ ಕುರಿತು ಮಾಹಿತಿ ನೀಡಿದರು.
    ಜಿಲ್ಲಾ ಸಂಸ್ಥೆಯಲ್ಲಿನ ಕೊರತೆಗಳನ್ನು ಸರಿಪಡಿಸಲು ಅನುಕೂಲ ಕಲ್ಪಿಸಬೇಕೆಂದು ಮನವಿ ಮಾಡಿದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ, ಡಿಡಿಪಿಐ ಎಸ್​.ಎಸ್​.ಬಿರಾದಾರ, ವಕೀಲ ರಾಘವೇಂದ್ರ ಪಾನಗಂಟಿ, ಉಪಾಧ್ಯೆ ಅರುಣಾ ವಸ್ತ್ರದ, ಜಿಲ್ಲಾ ಆಯುಕ್ತ ಮಲ್ಲಿಕಾರ್ಜುನ ಚೌಕಿಮಠ, ಕಲ್ಯಾಣ ಕರ್ನಾಟಕ ಉಸ್ತುವಾರಿ ಪಿ.ಮಲ್ಲೇಶ್ವರಿ ಜುಜಾರೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts