More

    ಉತ್ತಮ ಚಿಕಿತ್ಸೆ ನೀಡಲು ಸೂಚನೆ

    ಕೊಪ್ಪಳ: ನಗರದ ಜಿಲ್ಲಾ ಬೋಧಕ ಸ್ಪತ್ರೆಗೆ ಸೋಮವಾರ ದಿಢೀರ್​ ಭೇಟಿ ನೀಡಿದ ಜಿಲ್ಲಾಧಿಕಾರಿ ನಲಿನ್​ ಅತುಲ್​ ಪರಿಶೀಲನೆ ನಡೆಸಿದರು.

    ವಾರ್ಡ್​ಗಳಿಗೆ ತೆರಳಿ ರೋಗಿಗಳ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯಲ್ಲಿ ಸಿಗುತ್ತಿರುವ ಸೇವೆ, ಚಿಕಿತ್ಸೆ ಸರಿಯಾಗಿದೆಯೇ ಎಂದು ಕೇಳಿ ಮಾಹಿತಿ ಪಡೆದುಕೊಂಡರು. ಸಾಮಾನ್ಯ ವಾರ್ಡ್​ಗಳನ್ನು ವೀಸಿದ ಬಳಿಕ ಔಷಧ ಉಗ್ರಾಣಕ್ಕೆ ತೆರಳಿ ದಾಸ್ತಾನು ವಿವರ ಪಡೆದರು. ಆಸ್ಪತ್ರೆಯಲ್ಲಿ ಲಭ್ಯ ಇರುವ ಚಿಕಿತ್ಸೆಯನ್ನು ಸಮರ್ಪಕವಾಗಿ ನೀಡಿ. ರೋಗಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ. ಅಗತ್ಯ ಮೂಲ ಸೌಕರ್ಯ ಒದಗಿಸಿ ಎಂದು ವೈದ್ಯಾಧಿಕಾರಿಗಳಿಗೆ ತಾಕೀತು ಮಾಡಿದರು.

    ಕಿಮ್ಸ್​ ನಿರ್ದೇಶಕ ಡಾ.ವಿಜಯನಾಥ ಇಟಗಿ, ವೈದ್ಯಕಿಯ ಅಧೀಕ್ಷಕ ಡಾ.ವೇಣುಗೋಪಾಲ ಹಾಗೂ ಇತರ ವೈದ್ಯಾಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts