ಕೊಪ್ಪಳ: ಡಿಸಿಎಂ ಡಿ.ಕೆ.ಶಿವಕುಮಾರ್ ಸಾಕಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದಂತವರು ಮುಖ್ಯಮಂತ್ರಿ ಆಗಬಾರದು ಎಂದು ಸಮಾಜ ಪರಿವರ್ತನ ಸಮುದಾಯ ಮುಖ್ಯಸ್ಥ ಎಸ್.ಆರ್. ಹಿರೇಮಠ ಹೇಳಿದರು.
ಎಸ್.ಎಂ.ಕೃಷ್ಣ ಸಿಎಂ ಆಗಿದ್ದ ಅವಧಿಯಲ್ಲಿ ಸಚಿವರಾಗಿದ್ದ ಶಿವಕುಮಾರ್, ಬೆನಗಾನಹಳ್ಳಿಯಲ್ಲಿ ಭೂ ಕಬಳಿಕೆ ಮಾಡಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕುಟುಂಬ ಕೇತನಗಾನಹಳ್ಳಿಯಲ್ಲಿ ಗೋಮಾಳ ಜಮೀನು ಖರೀದಿಸಿ ಭ್ರಷ್ಟಾಚಾರ ಮಾಡಿದ್ದಾರೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರೂ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿವೆ. ಎಲ್ಲರೂ ಒಂದೇ. ಕೇಂದ್ರ ಸರ್ಕಾರ ಹಿಂಪಡೆದಿದ್ದ ಮೂರು ಕೃಷಿ ಕಾಯ್ದೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿಲ್ಲ. ಸರ್ಕಾರದಲ್ಲಿ ಇಚ್ಛಾಶಕ್ತಿಯ ಕೊರತೆ ಕಾಡುತ್ತಿದೆ. ವಾಪಸ್ ಪಡೆಯದೇ ಹೋದರೆ ಸಂಯುಕ್ತ ಹೋರಾಟದಿಂದ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.