ಕೊಪ್ಪಳ: ಗೃಹಜ್ಯೋತಿ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ಗಳವರೆಗೆ ಬಳಕೆಯ ಮಿತಿಯಲ್ಲಿ ಪ್ರತಿ ಗೃಹಬಳಕೆ ಗ್ರಾಹಕರ ಮಾಸಿಕ ಸರಾಸರಿ ಬಳಕೆ ಮೇಲೆ ಶೇ.10ರಷ್ಟು ಹೆಚ್ಚಿನ ಮಿತಿ ಬಿಲ್ಲಿನ ಮೊತ್ತ ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್ಗಳ ಬಳಕೆ ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸರ್ಕಾರ ಆದೇಶಿಸಿದೆ.

ಈ ಯೋಜನೆಯಡಿ ಗ್ರಾಹಕರು ಣಣಠಿಠ://ಠಜತಚಿಠಟಿಜಣರಠ.ಏಚಿಡಿಟಿಚಿಣಚಿಞಚಿ.ರಠತ.ಟಿ/ ನಲ್ಲಿ ನೋಂದಾಯಿಸಿಕೊಳ್ಳಬೇಕು. 200 ಯೂನಿಟ್ಗಳ ಬಳಕೆಯನ್ನು ಮೀರಿದ ಗ್ರಾಹಕರು ಸಂಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಬೇಕು. ಗ್ರಾಹಕರು ಮಂಜೂರಾದ ಲೋಡ್ಗಿಂತ ಅಧಿಕ ವಿದ್ಯುತ್ ಬಳಕೆ ಮಾಡಿದಲ್ಲಿ ಜೆಸ್ಕಾಂನಿಂದ ನಿಯಮಾನುಸಾರ ದಂಡ ವಿಧಿಸಲಾಗುವುದು. ಆದ್ದರಿಂದ ಗ್ರಾಹಕರು ಹೆಚ್ಚಿನ ಲೋಡ್ ಅನ್ನು ಸಕ್ರಮಗೊಳಿಸಲು ಸಂಬಂಧಪಟ್ಟ ಜೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಜೆಸ್ಕಾಂ ಕೊಪ್ಪಳ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.