ಕೊಪ್ಪಳ: ಗೃಹ ಲಕ್ಷ್ಮೀ ಯೋಜನೆಯಡಿ ಅರ್ಹ ಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವಂತೆ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಾಲಚಂದ್ರನ್ ಸೂಚಿಸಿದರು.

ತಾಲೂಕಿನ ಮುನಿರಾಬಾದ್ ಡ್ಯಾಂ ಗ್ರಾಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತನ್ನಿ. ಯಾವುದೇ ಕಾರಣಕ್ಕೂ ಅರ್ಹರು ಯೋಜನೆಯಿಂದ ವಂಚಿತರಾಗದಿರಲಿ. ಎಲ್ಲ ನ್ಯಾಯಬೆಲೆ ಅಂಗಡಿಯವರು ಪಡಿತರ ಸಂಗ್ರಹಣೆ, ವಿತರಣೆ, ಉಳಿಕೆ ಮಾಹಿತಿ ಲಕ ಅಳವಡಿಸಿ. ನ್ಯಾಯಬೆಲೆ ಅಂಗಡಿಕಾರರು ಸಭೆಗೆ ಹಾಜರಾಗಲು ಸೂಚಿಸಿ. ಕೊಪ್ಪಳ&ಹೊಸಪೇಟೆ ಮಾರ್ಗದ ಬಸ್ಗಳು ಮುನಿರಾಬಾದ್ ಬಸ್ ನಿಲ್ದಾಣಕ್ಕೆ ಕಡ್ಡಾಯವಾಗಿ ಬರುವಂತೆ ಸಾರಿಗೆ ಅಧಿಕಾರಿಗಳು ಕ್ರಮವಹಿಸಬೇಕು. ಗ್ರಾಮದ ಮುಂಭಾಗದ ಪಿಳ್ಳೆ ಹೋಟೆಲ್ ಬಳಿ ಕೋರಿಕೆ ನಿಲುಗಡೆಗೆ ಸೂಚಿಸುವಂತೆ ತಿಳಿಸಿದರು.
ಯುವನಿಧಿ ಯೋಜನೆಯಡಿ ಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಸಲ್ಲಿಸುವುದು ಕಡ್ಡಾಯಗೊಳಿಸಲಾಗಿತ್ತು. ಬದಲಾವಣೆ ಮಾಡಿದ್ದು ಪ್ರತಿ ಮೂರು ತಿಂಗಳಿಗೊಮ್ಮೆ ಘೋಷಣೆ ಸಲ್ಲಿಸಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ತಾಪಂ ಇಒ ದುಂಡಪ್ಪ ತುರಾದಿ, ತಹಸೀಲ್ದಾರ್ ವಿಠ್ಠಲ್ ಚೌಗಲಾ, ಗ್ರಾಪಂ ಅಧ್ಯಕ್ಷ ಆಯೂಬ್ಖಾನ್, ಉಪಾಧ್ಯೆ ಸೌಭಾಗ್ಯ ನಾಗರಾಜ, ಪ್ರಾಧಿಕಾರ ಸಮಿತಿ ಸದಸ್ಯರಾದ ದೇವರಾಜ ನಡುವಿನಮನಿ, ರಮೇಶ ಹ್ಯಾಟಿ, ಜ್ಯೋತಿ ಗೊಂಡಬಾಳ, ಸವಿತಾ ಗೋರಂಟ್ಲಿ, ಅನ್ನದಾನಸ್ವಾಮಿ, ವೆಹಬೂಬ್ಪಾಷಾ ಮಾನ್ವಿ, ಅನ್ವರ್ ಹುಸೇನ್ ಗಡಾದ, ಪರಶುರಾಮ ಕೊರವರ, ಧರ್ಮರಾಜರಾವ್ ಇತರರಿದ್ದರು.