ಕೊಪ್ಪಳ: ಹಾಸ್ಟೆಲ್ ಗುತ್ತಿಗೆ ನೌಕರರ ಬೇಡಿಕೆ ಈಡೇರಿಸದಿದ್ದಲ್ಲಿ ಜ.31ರಿಂದ ಅಡುಗೆ ಕೆಲಸ ಸ್ಥಗಿತಗೊಳಿಸಿ ಹೋರಾಟ ಮಾಡುವುದಾಗಿ ರಾಜ್ಯ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂದ ಜಿಲ್ಲಾಧ್ಯಕ್ಷ ಗ್ಯಾನೇಶ ಕಡಗದ ತಿಳಿಸಿದರು.
ಜಿಲ್ಲೆಯಲ್ಲಿ 1,700ಕ್ಕೂ ಅಧಿಕ ನೌಕರರಿದ್ದೆವೆ. ಹಲವು ದಶಕಗಳಿಂದ ಕೆಲಸ ಮಾಡುತ್ತಿದ್ದೇವೆ. ಖಾಸಗಿ ಏಜೆನ್ಸಿಗಳು ಸರಿಯಾದ ಸೇವೆ ಒದಗಿಸುತ್ತಿಲ್ಲ. 8 ತಿಂಗಳಿಂದ ವೇತನ ಬಾಕಿ ಉಳಿಸಿಕೊಂಡಿದೆ. ಸರ್ಕಾರ ಸಹಕಾಯಿ ಸಂಸ್ಥೆ ಮೂಲಕ ಗುತ್ತಿಗೆ ನೌಕರರಿಗೆ ಅವಕಾಶ ಕಲ್ಪಿಸಲು ಆದೇಶಿಸಿದೆ. ಅಕ್ಕ&ಪಕ್ಕದ ಜಿಲ್ಲೆಗಳಲ್ಲಿ ಈಗಾಗಲೇ ಜಾರಿ ಆಗಿದೆ. ನಮ್ಮ ಜಿಲ್ಲೆಯಲ್ಲಿ ಡಿಸಿ ಮಾಡಲು ಮನಸ್ಸು ಮಾಡುತ್ತಿಲ್ಲ. ಇದನ್ನು ಖಂಡಿಸಿ ಮೂರು ದಿನ ಪ್ರತಿಭಟನೆ ಮಾಡಿದರೂ ಸ್ಪಂದಿಸಿಲ್ಲ. ಬದಲಿಗೆ ನಮ್ಮನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದರೆಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಜ.31ರೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲಿದ್ದರೆ ಎಲ್ಲ ಗುತ್ತಿಗೆ ನೌಕರರು ಕೆಲಸ ಸ್ಥಗಿತಗೊಳಿಸಿ ಅರ್ನಿಧಿಷ್ಟ ಹೋರಾಟ ಹಮ್ಮಿಕೊಳ್ಳುತ್ತೇವೆ. ನಮಗಾಗುತ್ತಿರುವ ಅನ್ಯಾಯ ಕುರಿತು ಕಾರ್ಮಿಕ ಅಧಿಕಾರಿಗಳಿಗೂ ದೂರು ನೀಡಿದ್ದೇವೆಂದು ಹೇಳಿದರು. ಪ್ರಮುಖರಾದ ಕಾಸಿಂ ಸರ್ದಾರ, ಸುಂಕಪ್ಪ ಗದಗ, ಮಹಮ್ಮದ ರಫಿಕ್, ಕೀರಪ್ಪ ಇದ್ದರು.