ಕೊಪ್ಪಳ: ಕನಕಗಿರಿ ಉತ್ಸವ ಯಶಸ್ವಿಗೊಳಿಸಲು ವಿವಿಧ ಸಮಿತಿ ರಚಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಆದೇಶಿಸಿದ್ದಾರೆ.
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಂಘಟನಾ ಸಮಿತಿ ರಚಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ ಸಿಇಒ ಸಹ ಅಧ್ಯಕ್ಷರಾಗಿ, ಅಪರ ಜಿಲ್ಲಾಧಿಕಾರಿ ಸದಸ್ಯ ಕಾರ್ಯದರ್ಶಿ ಹಾಗೂ ಎಲ್ಲಾ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿಗಳು ಸಮಿತಿಯಲ್ಲಿದ್ದಾರೆ.
ಎಸ್‌ಪಿ ಅಧ್ಯಕ್ಷತೆಯಲ್ಲಿ ಭದ್ರತಾ ಸಮಿತಿ, ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸ್ವಾಗತ, ವೇದಿಕೆ ಮತ್ತು ಆಮಂತ್ರಣ ಪತ್ರಿಕೆ ಸರಬರಾಜು ಸಮಿತಿ, ಜಿ.ಪಂ ಉಪಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಸಮಿತಿ, ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾ ನಿರ್ದೇಶಕರ ಅಧ್ಯಕ್ಷತೆಯಲ್ಲಿ ವಸತಿ ಸಮಿತಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ನೇತೃತ್ವದಲ್ಲಿ ಸಾರಿಗೆ ಸಮಿತಿ, ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರ ಅಧ್ಯಕ್ಷತೆಯಲ್ಲಿ ಆಹಾರ ಸಮಿತಿ, ಡಿಎಚ್‌ಒ ಅಧ್ಯಕ್ಷತೆಯಲ್ಲಿ ಆರೋಗ್ಯ ನೈರ್ಮಲೀಕರಣ, ಲೋಕೋಪಯೋಗಿ ಇಲಾಖೆ ಇಇ ಅಧ್ಯಕ್ಷತೆಯಲ್ಲಿ ಮೂಲಭೂತ ಸೌಕರ್ಯ ಸಮಿತಿ, ಜೆಸ್ಕಾಂ ಇಇ ಅಧ್ಯಕ್ಷತೆಯಲ್ಲಿ ವಿದ್ಯುತ್ ಸರಬರಾಜು ಸಮಿತಿಯನ್ನು ರಚಿಸಿದೆ.
ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಕ್ರೀಡಾ ಸಮಿತಿ, ಕೃಷಿ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಮೆರವಣಿಗೆ ಸಮಿತಿ, ಜಿಲ್ಲಾ ವಾರ್ತಾಧಿಕಾರಿ ಅಧ್ಯಕ್ಷತೆಯಲ್ಲಿ ಪ್ರಚಾರ ಮತ್ತು ಮಾಧ್ಯಮ ಸಮಿತಿ, ತೋಟಗಾರಿಕೆ ಉಪನಿರ್ದೇಶಕರ ನೇತೃತ್ವದಲ್ಲಿ ವಸ್ತು ಪ್ರದರ್ಶನ ಸಮಿತಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಪ್ರವಾಸೋದ್ಯಮ ಸಮಿತಿಯನ್ನು ರಚಿಸಿದ್ದು, ಎಲ್ಲರೂ ಈಗಿನಿಂದಲೇ ಕಾರ್ಯಪ್ರವೃತ್ತರಾಗಲು ನಿರ್ದೇಶಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸೂಚನೆ ಮೇರೆಗೆ ಸಮಿತಿಗಳನ್ನು ರಚಿಸಿದ್ದು, ಉತ್ಸವ ಆಚರಣೆಗೆ ಸಿದ್ಧತೆ ನಡೆದಿರುವ ಬಗ್ಗೆ ಡಿಸಿ ತಿಳಿಸಿದ್ದಾರೆ.