More

    ನಾರಾಯಣಗೌಡ ಬಿಡುಗಡೆಗೆ ಆಗ್ರಹಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ

    ಕೊಪ್ಪಳ: ಕನ್ನಡಪರ ಹೋರಾಟಗಾರ ಟಿ.ಎ.ನಾರಾಯಣಗೌಡ ಹಾಗೂ ಇತರ ಕಾರ್ಯಕರ್ತರ ಬಂಧನ ಖಂಡಿಸಿ ಕರವೇ ನಾರಾಯಣಗೌಡ ಬಣದ ಜಿಲ್ಲಾ ಪದಾಧಿಕಾರಿಗಳು ಶುಕ್ರವಾರ ನಗರ ಕೇಂದ್ರ ಬಸ್​ ನಿಲ್ದಾಣ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

    ಕನ್ನಡ ನಾಡು-ನುಡಿಗಾಗಿ ಹಗಲಿರುಳು ನಾರಾಯಣಗೌಡ ಶ್ರಮಿಸುತ್ತಿದ್ದಾರೆ. ಕನ್ನಡ ಭಾಷೆ, ನೆಲ, ಜಲಕ್ಕಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. ಕನ್ನಡ ನಾಮಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಡಿ.27ರಂದು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

    ಈ ವೇಳೆ ಅವರು ಹಾಗೂ ಹಲವು ಕಾರ್ಯಕರ್ತರನ್ನು ಡಿಎಸ್​ಪಿ ಲಕ್ಷಿ$್ಮ ಪ್ರಸಾದ ಬಂಧಿಸಿದ್ದಾರೆ. ಇದು ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಹೀಗಿದ್ದರೂ ಬೇರೆ ಭಾಷೆ ನಾಮಲಕಗಳೇ ಹೆಚ್ಚು ರಾರಾಜಿಸುತ್ತಿವೆ. ಸರ್ಕಾರ ಹಾಗೂ ಸಂಬಂಧಿಸಿದ ಪ್ರಾಧಿಕಾರಗಳು ಮಾಡಬೇಕಾದ ಕೆಲಸವನ್ನು ಕರವೇ ಮಾಡುತ್ತಿದೆ. ಸರ್ಕಾರ ಹೋರಾಟಗಾರರನ್ನು ಬಂಧಿಸುವ ಮೂಲಕ ಕನ್ನಡ ವಿರೋಧಿ ನೀತಿ ಅನುಸರಿಸಿದೆ.

    ತಕ್ಷಣ ಬಂಧಿತರನ್ನು ಬಿಡುಗಡೆ ಮಾಡಬೇಕು. ಡಿಎಸ್ಪಿ ಲಕ್ಷಿ$್ಮ ಪ್ರಸಾದ ಅಮಾನತಾಗಬೇಕು. ಎಲ್ಲೆಡೆ ಕನ್ನಡ ನಾಮಲಕ ಕಡ್ಡಾಯಗೊಳಿಸಬೇಕೆಂದು ಒತ್ತಾಯಿಸಿದರು.

    ಪ್ರತಿಭಟನೆಯಲ್ಲಿ ಟಯರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲು ಪ್ರತಿಭಟನಕಾರರು ಮುಂದಾದರು. ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ. ಈ ವೇಳೆ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

    ಕರವೇ ಜಿಲ್ಲಾಧ್ಯಕ್ಷ ಗಿರಿಶಾನಂದ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಸನಗೌಡ ಪೋ.ಪಾಟೀಲ, ಯುವ ಘಟಕ ಜಿಲ್ಲಾಧ್ಯಕ್ಷ ಹನುಮಂತ ಬೆಸ್ತರ, ಜಿಲ್ಲಾ ಗೌರವಾಧ್ಯಕ್ಷ ಸಂಜಯ ಖಟವಟೆ, ಕುಷ್ಟಗಿ ತಾಲೂಕಾಧ್ಯಕ್ಷ ಪ್ರಕಾಶ ಮನ್ನೆರಾಳ,

    ಕಾರಟಗಿ ತಾಲೂಕಾಧ್ಯಕ್ಷ ಪ್ರಶಾಂತ ನಾಯಕ, ಕುಕನೂರು ತಾಲೂಕಾಧ್ಯಕ್ಷ ರಮೇಶ ಹಾಲವರ್ತಿ, ತಾಲೂಕಾ ಪ್ರಧಾನ ಕಾರ್ಯದರ್ಶಿ ನಿಂಗಪ್ಪ ಮೂಗಿನ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಭುವನೇಶ್ವರಿ ಮೊಟಗಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts