More

    ಸಂಗಣ್ಣ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಲಹೆ

    ಕೊಪ್ಪಳ: ಸಂಸದ ಸಂಗಣ್ಣ ಕರಡಿ, ನಾನು ಸ್ನೇಹಿತರು. ಕುಶಲೋಪರಿ ವಿಚಾರಿಸಲು ಅವರ ಮನೆಗೆ ಬಂದಿರುವೆ. ಪಕ್ಷ ಬದಲಾವಣೆ, ರಾಜಕೀಯ ನಡೆ ಬಗ್ಗೆ ಅವರು ಸೂಕ್ತ ನಿರ್ಧಾರ ಕೈಗೊಳ್ಳಲಿ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.

    ನಗರದ ಸಂಸದ ಸಂಗಣ್ಣ ಕರಡಿ ನಿವಾಸಕ್ಕೆ ಸೋಮವಾರ ಸಂಜೆ ಭೇಟಿ ನೀಡಿ ಮಾತನಾಡಿದರು.

    ಕಾಂಗ್ರೆಸ್​ ಅಭ್ಯರ್ಥಿ ರಾಜಶೇಖರ ಹಿಟ್ನಾಳ ನಾಮಪತ್ರ ಸಲ್ಲಿಕೆ ಇರುವ ಕಾರಣ ಕೊಪ್ಪಳಕ್ಕೆ ಬಂದಿರುವೆ. ಸಂಗಣ್ಣ ಕರಡಿ ನನ್ನ ಸ್ನೇಹಿತ. ಬಿಜೆಪಿಯಲ್ಲಿ ತತ್ವ, ಸಿದ್ಧಾಂತ ಬದಿಗಿರಿಸಿದ್ದಾರೆ. ಹೊಸ ರಾಜಕಾರಣ ಶುರುವಾಗಿದೆ. ಸಂಗಣ್ಣ ಸಾಕಷ್ಟು ಕೆಲಸ ಮಾಡಿದ್ದಾರೆ. ಇನ್ನೊಂದು ಬಾರಿ ಅವಕಾಶ ನೀಡಬಹುದಿತ್ತು. ಈಗ ಕಾಲ ಮಿಂಚಿದೆ. ಅವರ ಬದಲು ಬೇರೆಯವರಿಗೆ ಟಿಕೆಟ್​ ನೀಡಿದ್ದಾರೆ. ನಾನು ಬೇರೆ ಪಕ್ಷದಲ್ಲಿ ಇದ್ದರೂ ಕೊಪ್ಪಳಕ್ಕೆ ಬಂದಾಗ ಅವರ ಮನೆಗೆ ಬರುತ್ತೇನೆ. ಅವರು ಬೆಳಗಾವಿಗೆ ಬಂದಾಗ ನಮ್ಮ ಮನೆಗೆ ಬರುತ್ತಾರೆ ಎಂದರು.

    ನಾನು ಈ ಹಿಂದೆ ಸಂಗಣ್ಣನನ್ನು ಬಿಜೆಪಿಗೆ ಕರೆ ತಂದಿದ್ದೆ. 15 ವರ್ಷ ಬಿಜೆಪಿಯಲ್ಲಿ ಇದ್ದುಕೊಂಡು ಕ್ಷೇತ್ರದ ಸೇವೆ ಮಾಡಿದ್ದಾರೆ. ನಮ್ಮ ನಡುವೆ ಸ್ನೇಹ ಇರುವ ಕಾರಣ ನಾನು ಬಂದಿರುವೆ. ಕಾಂಗ್ರೆಸ್​ಗೆ ಬರುವಂತೆ ನಾನೂ ಕರೆದಿಲ್ಲ. ಅವರೂ ಹೇಳಿಲ್ಲ. ರಾಜಕೀಯ ನೆಲೆ ಕಂಡುಕೊಳ್ಳಬೇಕಿದೆ. ಬಿಜೆಪಿಯಲ್ಲಿದ್ದುಕೊಂಡು ಅಥವಾ ಬೇರೆಡೆ ಹೋಗಿ ಕಂಡುಕೊಳ್ಳಬೇಕೆಂಬ ನಿರ್ಧಾರ ತೆಗೆದುಕೊಳ್ಳಬೇಕಾದವರು ಸಂಗಣ್ಣ ಹಾಗೂ ಅವರ ಕುಟುಂಬದವರು. ಕಾಲ ಎಲ್ಲ ನಿರ್ಧರಿಸಲಿದೆ. ಅವರಿಗೆ ಒಳ್ಳೆಯ ಭವಿಷ್ಯ ಸಿಗಲಿ ಎಂಬುದು ನನ್ನ ಅಪೇೆ ಎಂದು ಭೇಟಿ ವಿಷಯದ ಮಾಹಿತಿ ನೀಡಿದರು.

    ಇನ್ನೂ ಕಾಲವಿದೆ. ಅವರ ಆಲೋಚನೆ, ನಾಡಿ ಮಿಡಿತ ಅರಿತಿರುವೆ. ಕುಟುಂಬದೊಡನೆ ಚರ್ಚಿಸಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತಾರೆ. ಬಂಗಾರ, ವಜ್ರ ಎಲ್ಲೇ ಇದ್ದರೂ ಅದಕ್ಕೆ ಬೆಲೆ ಇರುತ್ತದೆ. ಓಡುವ ಕುದುರೆಗೆ ಜಿದ್ದು ಕಟ್ಟಲು ಎಲ್ಲರೂ ಮುಂದೆ ಬರುತ್ತಾರೆ. ಸಂಗಣ್ಣ ಓಡುವ ಕುದುರೆ. ಅದು ಬಿಜೆಪಿಗೆ ಗೊತ್ತಿಲ್ಲದ್ದಕ್ಕೆ 66ಕ್ಕೆ ಬಂದಿದ್ದಾರೆ. ವಿನಾಶ ಕಾಲ ಬಂದಿದ್ದಕ್ಕೆ ಈ ರೀತಿ ವರ್ತಿಸುತ್ತಿದ್ದಾರೆಂದು ಕುಟುಕಿದರು.

    ಕುಮಾರಸ್ವಾಮಿ ಅನುಭವಸ್ಥರು. ಗ್ಯಾರಂಟಿ ಬಗ್ಗೆ ಮಾತನಾಡುವಾಗ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆಂದು ಹೇಳಿದ್ದಾರೆ. ನಾನು ಅದನ್ನು ಗಮನಿಸಿರುವೆ. ಹಾಗೇ ಹೇಳಬಾರದಿತ್ತು. ಅವರಿಗೆ ಯಾಕೆ ಈ ದುರ್ಬುದ್ಧಿ ಬಂತು ಗೊತ್ತಿಲ್ಲ.

    ಲಕ್ಷ್ಮಣ ಸವದಿ. ಮಾಜಿ ಡಿಸಿಎಂ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts