More

    ಚುನಾವಣೆ ಸಭೆ, ಸಮಾರಂಭಕ್ಕೆ ಅನುಮತಿ ಕಡ್ಡಾಯ

    ಕೊಪ್ಪಳ: ಚುನಾವಣಾ ಸಭೆ, ಸಮಾರಂಭಗಳಿಗೆ ಅನುಮತಿ ಪಡೆಯವುದು ಕಡ್ಡಾಯ ಎಂದು ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕಿ ಹೇಮ ಪುಷ್ಪ ಶರ್ಮಾ ತಿಳಿಸಿದರು.

    ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಹಾಗೂ ಏಜೆಂಟ್​ಗಳೊಂದಿಗೆ ಮಂಗಳವಾರ ಸಭೆ ನಡೆಸಿ ಮಾತನಾಡಿದರು.

    ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು ಚುನಾವಣಾ ವೆಚ್ಚದ ವಿವರಗಳನ್ನು ಆಯೋಗಕ್ಕೆ ಸಲ್ಲಿಸಬೇಕು. ರ್ಯಾಲಿ, ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಆಯಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯಿರಿ. ಜಿಲ್ಲಾ ಮಟ್ಟದ ವಿಷಯಗಳಿಗೆ ಜಿಲ್ಲಾ ಚುನಾವಣಾ ಅಧಿಕಾರಿಗಳಿಂದ ಅನುಮತಿ ಪಡೆಯಿರಿ. ಚುನಾವಣಾ ವೆಚ್ಚಕ್ಕಾಗಿ ಪ್ರತ್ಯೇಕ ಖಾತೆ ತೆರೆಯಿರಿ. ವೆಚ್ಚದ ವಿವರಗಳನ್ನು ರಿಜಿಸ್ಟರ್​ನಲ್ಲಿ ನಮೂದಿಸಿ. ಅಭ್ಯರ್ಥಿವಾರು ಅಧಿಕಾರಿಗಳು ವೆಚ್ಚ ದಾಖಲಿಸಿಕೊಳ್ಳುತ್ತಾರೆ. ಅಭ್ಯರ್ಥಿ ನೀಡುವ ವಿವರದಲ್ಲಿ ನಮೂದಾಗದೇ ಇರುವ ವೆಚ್ಚದ ವಿವರಗಳನ್ನು ಚುನಾವಣಾಧಿಕಾರಿಗಳು ನಮೂದಿಸಿಕೊಳ್ಳುವರು. ಅಭ್ಯರ್ಥಿಗಳು ತಪ್ಪು ಮಾಹಿತಿ ನೀಡಲು ಯತ್ನಿಸಿದಲ್ಲಿ, ನಮ್ಮಲ್ಲಿರುವ ಮಾಹಿತಿಯೊಂದಿಗೆ ತಾಳೆ ಹಾಕಲಾಗುವುದು. ಪ್ರತಿ ಅಭ್ಯರ್ಥಿ ಮೂರು ಬಾರಿ ವೆಚ್ಚದ ವಿವರವನ್ನು ಸಲ್ಲಿಸುವಂತೆ ಸೂಚಿಸಿದರು.

    ಡಿಸಿ ನಲಿನ್​ ಅತುಲ್​ ಮಾತನಾಡಿ, ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 9,19,499 ಪುರುಷ, 9,46,763 ಮಹಿಳೆ ಹಾಗೂ 135 ಇತರ ಒಟ್ಟು 18,66,397 ಮತದಾರರಿದ್ದಾರೆ. ಮನೆಯಿಂದ ಮತದಾನಕ್ಕಾಗಿ ಮಾರ್ಗ ವಿವರ ಸಿದ್ಧಪಡಿಸಲಾಗಿದೆ. ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷರು, ಚುನಾವಣಾ ವೆಚ್ಚ ವೀಕ್ಷಕರು ಹಾಗೂ ಪೊಲೀಸ್​ ವೀಕ್ಷಕರು ಜಿಲ್ಲೆಗೆ ಆಗಮಿಸಿದ್ದು, ಜಿಲ್ಲಾಡಳಿತ ಭವನದಲ್ಲಿ ಬೆಳಗ್ಗೆ 11 ರಿಂದ ಮಾಧ್ಯಾಹ್ನ 3 ಗಂಟೆಯವರೆಗೆ ಲಭ್ಯವಿರುವರು ಎಂದು ಮಾಹಿತಿ ನೀಡಿದರು.

    ಪೊಲೀಸ್​ ವೀಕ್ಷಕ ಡಾ.ಸತೀಶ ಕುಮಾರ್​, ಎಸ್ಪಿ ಯಶೋದಾ ವಂಟಗೋಡಿ, ಎಡಿಸಿ ಸಾವಿತ್ರಿ ಕಡಿ, ಚುನಾವಣಾ ಸಿಬ್ಬಂದಿ, ರಾಜಕೀಯ ಪಕ್ಷಗಳ ಏಜೆಂಟ್​ಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts