ಕೊಪ್ಪಳ: ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ೆ.8ರಿಂದ ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ೆ.8ರಂದು ಬೆಳಗ್ಗೆ 11 ಗಂಟೆಗೆ ಕುಕನೂರಿನಲ್ಲಿ ಹಮ್ಮಿಕೊಂಡ ಸಹಕಾರ ಜಾಗೃತಿ ಸಮಾವೇಶದಲ್ಲಿ ಭಾಗಿಯಾಗುವರು. ಮಧ್ಯಾಹ್ನ ಕನಕಗಿರಿಗೆ ಆಗಮಿಸಿ ಕಲ್ಯಾಣ ಮಂಟಪ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳಿ ದಾವಣಗೆರೆಗೆ ಪ್ರಯಾಣಿಸುವರು. ೆ.9ರಂದು ಹರಿಹರ ತಾಲೂಕಿನ ರಾಜನಳ್ಳಿಯಿಂದ ಹೊರಟು ಸಂಜೆ 6ಕ್ಕೆ ಕಾರಟಗಿಗೆ ಆಗಮಿಸಿ ಸಾರ್ವಜನಿಕರ ಕುಂದುಕೊರತೆ ಆಲಿಸುವರು. ೆ.10ರಂದು ಬೆಳಗ್ಗೆ 10 ಗಂಟೆಗೆ ಕಾರಟಗಿ ತಾಲೂಕಿನ ಬೂದಗುಂಪಾ ಗ್ರಾಮದ ಸಿದ್ದೇಶ್ವರ ದೇಶಿಕರ ನಿರಂಜನ ಚರಪಟ್ಟಾಧಿಕಾರದಲ್ಲಿ ಪಾಲ್ಗೊಳ್ಳುವರು. ಬಳಿಕ ಬೆಂಗಳೂರಿಗೆ ಪ್ರಯಾಣಿಸುವರು.