ಶಾಲಾ ಆದ್ಯತೆ ನಮೂದಿಸಲು ವಿದ್ಯಾರ್ಥಿಗಳಿಗೆ ಸೂಚನೆ

ಕೊಪ್ಪಳ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ. ಎ.ಪಿ.ಜೆ.ಅಬ್ದುಲ್​ ಕಲಾಂ ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗಾಗಿ 6ನೇ ತರಗತಿ ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಶಾಲಾ ಆದ್ಯತೆಯನ್ನು ನಮೂದಿಸುವಂತೆ ಸೂಚಿಸಲಾಗಿದೆ.

blank

ಮೇಲ್ಕಂಡ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ನೀಡಲು ಆನ್​ಲೈನ್​ ಮುಖಾಂತರ ಸೇವಾಸಿಂಧು ಪೋರ್ಟಲ್​ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ಏಪ್ರಿಲ್​ 27 ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು. ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮಾತ್ರ ಶಾಲಾ ಆದ್ಯತೆಯನ್ನು (ಖಛಿಠಠಟ ಕಡಿಠಡಿಣಥಿ) ನಮೂದಿಸಲು ಮೇ 17 ರವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ. ಆದ್ದರಿಂದ ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್​ಸೈಟ್​   dom.karnataka.gov.in    ಗೆ ಭೇಟಿ ನೀಡಿ ಶಾಲಾ ಆದ್ಯತೆಯನ್ನು ನಮೂದಿಸಲು ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ, ತಮ್ಮ ಹತ್ತಿರದ ವಸತಿ ಶಾಲೆ, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ 08539-225070, 8088892549, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಗಂಗಾವತಿ-9972624670, ಕುಫ್ಟಿಗಿ-8861610578, ಯಲಬುರ್ಗಾ -9620522537 ವಿಳಾಸಗಳಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank