More

    ತೋಟಗಾರಿಕೆ ಕ್ಲಸ್ಟರ್ ವ್ಯಾಪ್ತಿಗೆ ಕೊಪ್ಪಳ ಸೇರಿಸಲು ಎಂಪಿ‌ ಸಂಗಣ್ಣ ಮನವಿ

    ಕೊಪ್ಪಳ: ಚಿತ್ರದುರ್ಗದಲ್ಲಿ ನಿರ್ಮಿಸುವ ತೋಟಗಾರಿಕೆ ಕ್ಲಸ್ಟರ್​ ವ್ಯಾಪ್ತಿಗೆ ಕೊಪ್ಪಳ ಜಿಲ್ಲೆಯನ್ನು ಸೇರಿಸಿ. ದಾಳಿಂಬೆ ಬೆಳೆಯುವ ರೈತರಿಗೆ ಸಿಡಿಪಿ ಕಾರ್ಯಕ್ರಮದಡಿ ಪ್ರೋತ್ಸಾಹಧನ ನೀಡಲು ಒತ್ತಾಯಿಸಿ ಸಂಸದ ಸಂಗಣ್ಣ ಕರಡಿ ಮಂಗಳವಾರ ಕೇಂದ್ರ ತೋಟಗಾರಿಕೆ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ರಾಕೇಶ್​ ರಂಜನ್​ಗೆ ದೆಹಲಿಯಲ್ಲಿ ಮನವಿ ಸಲ್ಲಿಸಿದರು.

    ರಾಷ್ಟ್ರೀಯ ತೋಟಗಾರಿಕಾ ಮಂಡಳಿ ದೇಶದಾದ್ಯಂತ ತೋಟಗಾರಿಕೆ ಕ್ಲಸ್ಟರ್​ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ. ಯೋಜನೆಯ ಭಾಗವಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಕ್ಲಸ್ಟರ್​ ನಿರ್ಮಿಸಲು ಮುಂದಾಗಿದೆ. ನಮ್ಮ ಭಾಗದ ದಾಳಿಂಬೆ ರಫ್ತುದಾರರು ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ.

    ಚರ್ಚೆ ವೇಳೆ ಕೊಪ್ಪಳ ಜಿಲ್ಲೆಯಲ್ಲಿ 5 ಸಾವಿರ ಹೆಕ್ಟೇರ್​ ದಾಳಿಂಬೆ ಬೆಳೆ ಬೆಳೆಯಲಾಗುತ್ತಿದೆ. ಜಿಲ್ಲೆಯಲ್ಲಿ ಸರಿಯಾದ ಮಾರುಕಟ್ಟೆ, ಮೂಲಸೌಕರ್ಯಗಳ ಕೊರತೆ ಇದೆ. ಗುಣಮಟ್ಟದ ದಾಳಿಂಬೆ ಬೆಳೆದ ರೈತರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಬೇಕಿದೆ ಎಂದರು.

    ಚಿತ್ರದುರ್ಗ ಕ್ಲಸ್ಟರ್​ ವ್ಯಾಪ್ತಿಗೆ ಕೊಪ್ಪಳ ಸೇರಿಸಿಲ್ಲ. ಪರಿಣಾಮ ಇಲ್ಲಿನ ರೈತರು ಸಿಡಿಪಿ ಕಾರ್ಯಕ್ರಮದಡಿ ಪ್ರೋತ್ಸಾಹಧನ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೊಪ್ಪಳ ಜಿಲ್ಲೆಯನ್ನು ಕ್ಲಸ್ಟರ್​ ವ್ಯಾಪ್ತಿಗೆ ಸೇರಿಸಿದಲ್ಲಿ ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.

    ಕೊಪ್ಪಳ ಜಿಲ್ಲೆಯಲ್ಲಿ 5 ಸಾವಿರ ಹೆಕ್ಟೇರ್​ ಪ್ರದೇಶದಲ್ಲಿ ದಾಳಿಂಬೆ ಬೆಳೆಯಲಾಗುತ್ತಿದೆ. ರೈತರಿಗೆ ಸಿಡಿಪಿ ಕಾರ್ಯಕ್ರಮದಡಿ ಪ್ರೋತ್ಸಾಹಧನ, ಚಿತ್ರದುರ್ಗ ಜಿಲ್ಲೆಯಲ್ಲಿ ನಿಮಾರ್ಣವಾಗುವ ಕ್ಲಸ್ಟರ್​ ವ್ಯಾಪ್ತಿಗೆ ಜಿಲ್ಲೆಯನ್ನು ಸೇರ್ಪಡೆಗೊಳಿಸಲು ಮನವಿ ಸಲ್ಲಿಸಿದ್ದೇನೆ. ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

    -ಸಂಗಣ್ಣ ಕರಡಿ. ಕೊಪ್ಪಳ ಸಂಸದ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts