More

    ಪಲ್ಸ್​ ಪೋಲಿಯೋ ಟಾಸ್ಕ್​ ಫೋರ್ಸ್​ ಸಮಿತಿ ಸಭೆ

    ಕೊಪ್ಪಳ: ಜಿಲ್ಲೆಯಲ್ಲಿ ಯಾವೊಂದು ಅರ್ಹ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ನಲಿನ್​ ಅತುಲ್​ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪಲ್ಸ್​ ಪೋಲಿಯೋ ಟಾಸ್ಕ್​ೋರ್ಸ್​ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.

    ಜಿಲ್ಲಾದ್ಯಂತ ಪೋಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮಾ.3ರಿಂದ ನಾಲ್ಕು ದಿನ ನಿರಂತರವಾಗಿ ಜರುಗಲಿದ್ದು, ಅರ್ಹ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿ. ಯಾವೊಂದು ಮಗು ಬಿಟ್ಟು ಹೋಗದಂತೆ ನೋಡಿಕೊಳ್ಳಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ ಇಲಾಖೆ, ನಗರ, ಸ್ಥಳಿಯ ಸಂಸ್ಥೆಗಳು ಲಸಿಕೆ ಕುರಿತು ಜಾಗೃತಿ ಚಟುವಟಿಕೆ ಹಮ್ಮಿಕೊಳ್ಳಿ. 5 ವರ್ಷದೊಳಗಿನ 1,76,083 ಮಕ್ಕಳನ್ನು ಗುರುತಿಸಿದ್ದು, 898 ಬೂತ್​, 15 ಸಂಚಾರಿ ಬೂತ್​ ನಿರ್ಮಿಸಲಾಗಿದೆ. ಸಾರ್ವಜನಿಕರು ಹತ್ತಿರದ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.

    ಲಸಿಕಾಕರಣ ನಡೆವಾಗ ಅಂಗನವಾಡಿ ಕೇಂದ್ರ, ಶಾಲೆಗಳನ್ನು ತೆರೆದಿರಬೇಕು. ಇಬ್ಬರು ಶಿಕ್ಷಕರು, ಪ್ರೌಢಶಾಲೆ, ಕಿರಿಯ ಮಹಾವಿದ್ಯಾಲಯ ಮತ್ತು ಪ್ರಥಮ ದರ್ಜೆ ಕಾಲೇಜುಗಳಿರುವೆಡೆ ಎನ್​ಎಸ್​ಎಸ್​ ಮತ್ತು ಎನ್​ಸಿಸಿ ವಿದ್ಯಾರ್ಥಿಗಳನ್ನು ನಿಯೋಜಿಸಿ ಕೆಲಸ ನಿರ್ವಹಿಸಿ. ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು, ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸದಸರು, ಸಿಡಿಪಿಒಗಳು ಸೇರಿ ಎಲ್ಲ ಸ್ತ್ರೀ ಶಕ್ತಿ ಪದಾಧಿಕಾರಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಎಂದು ನಿರ್ದೇಶಿಸಿದರು.

    ಡಿಎಚ್​ಒ ಡಾ.ಟಿ.ಲಿಂಗರಾಜು, ಬಳ್ಳಾರಿಯ ಎಸ್​ಎಂಒ ಡಾ.ಶ್ರೀಧರ್​, ಜಿಲ್ಲಾ ಆರ್​ಸಿಎಚ್​ ಅಧಿಕಾರಿ ಡಾ.ಪ್ರಕಾಶ, ತಹಸೀಲ್ದಾರ ವಿಠ್ಠಲ್​ ಚೌಗಲಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಸೇರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts