More

  ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್​ ವಿತರಣೆ

  ಕೊಪ್ಪಳ: ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ನೀಡುತ್ತಿದ್ದು, ಇನ್ನು ಮುಂದೆ ರಾಗಿ ಮಾಲ್ಟ್​ ನೀಡಲಾಗುತ್ತದೆ. ಇದರಿಂದ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಡಿಡಿಪಿಐ ಶ್ರೀಶೈಲ ಬಿರಾದಾರ್​ ಹೇಳಿದರು.

  ನಗರದ ಸಿಪಿಎಸ್​ ಶಾಲೆಯಲ್ಲಿ ಶಿಕ್ಷಣ ಇಲಾಖೆ ಹಾಗೂ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್​ ಸಹಯೋಗದಲ್ಲಿ ಗುರುವಾರ ರಾಗಿ ಮಾಲ್ಟ್​ ನೀಡುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

  ಸರ್ಕಾರಿ ಮತ್ತು ಅನುದಾನಿತ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈಗಾಗಲೇ ಮಧ್ಯಾಹ್ನನದ ಬಿಸಿಯೂಟದೊಂದಿಗೆ ವಾರದಲ್ಲಿ 5 ದಿನ ಕ್ಷೀರಭಾಗ್ಯ ಯೋಜನೆಯಡಿ ಹಾಲು ನೀಡಲಾಗುತ್ತಿದೆ. ಇಂದಿನಿಂದ ರಾಗಿ ಮಾಲ್ಟ್​ ನೀಡುವ ಯೋಜನೆಯು ಜಾರಿಗೆಯಾಗಿದೆ. ಇದರಿಂದ ಮಕ್ಕಳಲ್ಲಿ ಇರುವ ಅಪೌಷ್ಟಿಕತೆ ಹೋಗಲಾಡಿಸಬಹುದು. ಪ್ರತಿಯೊಬ್ಬ ವಿಧ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಸರ್ಕಾರದ ಯೋಜನೆ ಬಳಿಸಿಕೊಳ್ಳಬೇಕು ಎಂದು ಹೇಳಿದರು.

  ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಅನಿತಾ ಮಾತನಾಡಿದರು. ಶಾಲೆ ಮುಖ್ಯ ಶಿಕ್ಷಕ ಎಂ.ಡಿ.ಗುಲಾಮಹುಸೇನ ಅಧ್ಯಕ್ಷತೆವಹಿಸಿದ್ದರು. ಬಿಇಒ ಶಂಕ್ರಯ್ಯ .ಟಿ.ಎಸ್​, ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ, ತಾಪಂ ಅಧಿಕಾರಿ ಮಹೇಶ, ಕ್ಷೇತ್ರ ಸಮ್ವಯಾಧಿಕಾರಿ ಪ್ರಕಾಶ ತಗಡಿನಮನಿ, ತಾಲೂಕ ಅಕ್ಷರ ದಾಸೋಹ ಅಧಿಕಾರಿ ಹನುಮಂತಪ್ಪ, ದೈಹಿಕ ಶಿಕ್ಷಣಾಧಿಕಾರಿ ಬಸವರಾಜ, ಶಿಕ್ಷಣ ಸಂಯೋಜಕ ಭೀಮಪ್ಪ ಹೂಗಾರ, ಶಿಕ್ಷಕರಾದ ಮೊಹಮ್ಮದ ಆಭೀದಹುಸೇನ ಅತ್ತಾರ, ವಿರುಪಾಕ್ಷಪ್ಪ ಬಾಗೋಡಿ, ನಾಗಪ್ಪ ನರಿ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts