More

    ಪರೀಕ್ಷಾ ಅಕ್ರಮಗಳಾಗದಂತೆ ಎಚ್ಚರವಹಿಸಿ

    • ಡಿಸಿ ನಲಿನ್​ ಅತುಲ್​ ಸೂಚನೆ
    • ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಭಾವಿ ಸಭೆ

    ಕೊಪ್ಪಳ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಯಲ್ಲಿ ಅಕ್ರಮ, ಅನಗತ್ಯ ಗೊಂದಲ, ಅನನುಕೂಲಗಳಾಗದಂತೆ ನೋಡಿಕೊಂಡು ಅಚ್ಚುಕಟ್ಟಾಗಿ ನಡೆಸಿ ಎಂದು ಜಿಲ್ಲಾಧಿಕಾರಿ ನಲಿನ್​ ಅತುಲ್​ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಡಿಸಿ ಕಚೇರಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷ ಹಿನ್ನೆಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

    ಮಾ.25ರಿಂದ ಏಪ್ರೀಲ್​ 6ವರೆಗೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ಇರಲಿದೆ. ಯಾವುದೇ ಅಕ್ರಮ ಚಟುವಟಿಕೆಗೆ ಅವಕಾಶ ನೀಡಬೇಡಿ. ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಿ. ಪ್ರಶ್ನೆ ಪತ್ರಿಕೆಗಳನ್ನು ಖಜಾನೆಯಲ್ಲಿ ಠೇವಣಿ ಮಾಡಿ. ಪರೀಕ್ಷಾ ದಿನದಂದು ಸರಿಯಾದ ಸಮಯಕ್ಕೆ ಪರೀಾ ಕೇಂದ್ರ ತಲುವುಂತೆ ನೋಡಿಕೊಳ್ಳಿ. ಈ ಬಗ್ಗೆ ಮಾರ್ಗ ಅಧಿಕಾರಿಗಳು ಎಚ್ಚರವಹಿಸಿ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್​, ಕ್ಯಾಲ್ಕುಲೇಟರ್​ ಸೇರಿ ಇತರ ಎಲೆಕ್ಟ್ರಾನಿಕ್​ ಉಪಕರಣ ನಿಷಿದ್ಧ. ವಿದ್ಯಾರ್ಥಿಗಳಿಗೆ ಸೂಕ್ತ ಆಸನ, ಕುಡಿವ ನೀರು ಸೇರಿ ಅಗತ್ಯ ಸೌಲಭ್ಯ ಕಲ್ಪಿಸಿ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅಗತ್ಯಕ್ಕೆ ತಕ್ಕಂತೆ ಬಸ್​ ಸಮಯ ಬದಲಾವಣೆ ಮಾಡಿ. ಪೊಲೀಸ್​ ಬಂದೋಬಸ್ತ್​ ಒದಗಿಸಿ. ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ, ವಿದ್ಯಾರ್ಥಿಗಳನ್ನು ಬಿಟ್ಟು ಇತರರಿಗೆ ಕೇಂದ್ರದೊಳಗೆ ಪ್ರವೇಶವಿಲ್ಲ ಎಂದರು.

    ಯಾವುದೇ ಪರೀಕ್ಷಾ ಪೂರ್ವ ಹಾಗೂ ಪರೀಕ್ಷಾ ಸಮಯದಲ್ಲಿ ಪಶ್ನೆ ಪತ್ರಿಕೆ ಸೋರಿಕೆ ಮಾಡುವುದು ಕಂಡುಬಂದಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ ಕಂಡಿಕೆ 115ರ ದಂಡ ಸಂಹಿತೆ ಪರೀಕ್ಷಾ ನಿಯಮ ಉಲ್ಲಂಘನೆ ಸೆಕ್ಷನ್​ 24ಎ ಪ್ರಕಾರ ತಪ್ಪಿತಸ್ಥರಿಗೆ 3 ರಿಂದ 5 ವರ್ಷಗಳ ವರೆಗೆ ಜೈಲುವಾಸ ಹಾಗೂ 5 ಲಕ್ಷದವರೆಗೆ ದಂಡ ವಿಧಿಸಲು ಕಾಯ್ದೆಯಲ್ಲಿ ಅವಕಾಶವಿದ್ದು, ಶಿಕ್ಷಕರು, ಪರೀಕ್ಷಾ ನಿಯೋಜಿತ ಸಿಬ್ಬಂದಿಗಳು ಜವಾಬ್ದಾರಿ ಹಾಗೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

    ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ ಮಾತನಾಡಿ, ಬಿಸಿಲು ಹೆಚ್ಚಿದ್ದು, ವಿದ್ಯಾರ್ಥಿಗಳ ತುರ್ತು ಆರೋಗ್ಯ ಚಿಕಿತ್ಸೆ ಬೇಕಿದ್ದಲ್ಲಿ ಅನುಕೂಲವಾಗಲು ಪ್ರಥಮ ಚಿಕಿತ್ಸಾ ಕಿಟ್​ ಕೇಂದ್ರದಲ್ಲಿ ಇರಿಸಿ. ಆರೋಗ್ಯ ಸಹಾಯಕರನ್ನು ನಿಯೋಜಿಸಿ. ಪರೀಕ್ಷೆ ಬರೆಯುವ ವಿಕಲಚೇತನ ವಿದ್ಯಾರ್ಥಿಗಳಿಗೆ ನೆಲ ಮಹಡಿಯಲ್ಲಿ ಸೂಕ್ತ ಆಸನ ವ್ಯವಸ್ಥೆ ಮಾಡಿ. ಅಂಧ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮತ್ತು ಬರವಣಿಗೆ ಸಹಾಯಕರ ಒಪ್ಪಿಗೆ ಪತ್ರ ಪರಿಶೀಲಿಸಿ. ಸುಗಮವಾಗಿ ಪರೀಕ್ಷೆ ನಡೆಯುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ಡಿಡಿಪಿಐ ಶ್ರೀಶೈಲ ಬಿರಾದಾರ ಮಾತನಾಡಿ, ಪರೀಕ್ಷಗೆ 25,481 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಗಂಗಾವತಿ ತಾಲೂಕಿನ 23, ಕೊಪ್ಪಳ 23, ಕುಷ್ಟಗಿ 15 ಹಾಗೂ ಯಲಬುರ್ಗಾ ತಾಲೂಕಿನ 14 ಒಟ್ಟು 75 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಮುಖ್ಯ ಅಧೀಕ್ಷಕರು ಹಾಗೂ ಪ್ರಶ್ನೆಪತ್ರಿಕೆ ಅಭಿರಕ್ಷಕರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಹೆಚ್ಚುವರಿ ಎಸ್​ಪಿ ಹೇಮಂತ್​ಕುಮಾರ, ಬಿಇಒಗಳು, ವಿಷಯ ಪರಿವೀಕ್ಷಕರು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಪರೀಾ ನೋಡಲ್​ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts