More

    ಬಜೆಟ್ ನಲ್ಲಿ‌ ಕೊಪ್ಪಳಕ್ಕೆ ಬಂಪರ್ ಕೊಡುಗೆ : ಸಚಿವ ತಂಗಡಗಿ

    ಕೊಪ್ಪಳ: ಹಲವು ವರ್ಷಗಳ ಬೇಡಿಕೆಯಾಗಿರುವ ಕೊಪ್ಪಳ ಜಿಲ್ಲೆಯ ನವಲಿ ಬಳಿ‌ 15,600 ಕೋಟಿ ವೆಚ್ಚದಲ್ಲಿ ಸಮತೋಲನಾ ಜಲಾಶಯ ನಿರ್ಮಾಣ ಮಾಡುವ ಬಗ್ಗೆ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು,‌ ಜಿಲ್ಲೆಗೆ ಅನೇಕ ಕೊಡುಗೆ ನೀಡಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

    ಪೌರಾಣಿಕ ಹಾಗೂ ಐತಿಹಾಸಿಕ ಪ್ರಖ್ಯಾತಿ ಹೊಂದಿರುವ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ಮೀಸಲಿಟ್ಟಿರುವುದು ಉತ್ತಮ ಬೆಳವಣಿಗೆ. ಈ ಹಿಂದಿನ ಸರ್ಕಾರ ಕೇವಲ ಸುಳ್ಳು ಹೇಳಿ ಅಂಜನಾದ್ರಿ ಅಭಿವೃದ್ಧಿಗೆ ನೂರು ಕೋಟಿ ಇಟ್ಟಿದ್ದಾಗಿ ಸುಳ್ಳು ಹೇಳಿತ್ತು. ಆಂಜನೇಯ ನಾಡಿನಲ್ಲಿ ಅಭಿವೃದ್ಧಿ ಮಾಡಿ ತೋರಿಸುತ್ತೇವೆ ಎಂದು ಹೇಳಿದರು.

    ಪ್ರಸಕ್ತ ಸಾಲಿನ ಬಜೆಟ್ ನಲ್ಲಿ 970 ಕೋಟಿ ವೆಚ್ಚದಲ್ಲಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ – ಕುಕನೂರು ತಾಲ್ಲೂಕಿನ 38 ಕೆರೆಗಳನ್ನು ಕುಡಿಯುವ ನೀರು ಹಾಗೂ ಅಂತರ ಜಲ ಅಭಿವೃದ್ಧಿಗಾಗಿ ಕೆರೆ ತುಂಬಿಸುವ ಯೋಜನೆ, ಕೊಪ್ಪಳ ಏತ ನೀರಾವರಿ ಹಾಗೂ ಕುಕನೂರು ಮತ್ತು ಯಲಬುರ್ಗಾ ತಾಲ್ಲೂಕಿನಲ್ಲಿ ಕೆರೆ ಅಥವಾ ಬ್ರಿಡ್ಜ್ ಕಂ ಬ್ಯಾರೇಜ್ ಯೋಜನೆ ನಿರ್ಮಾಣ ಹಾಗೂ ಕೊಪ್ಪಳದಲ್ಲಿ ವಿಶ್ವ ವಿದ್ಯಾಲಯಗಳ ಘಟಕ ಕಾಲೇಜನ್ನು ಅವಶ್ಯವಿರುವ ಕಡೆ ಜಿಲ್ಲಾ ಅಥವಾ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪನೆಗೆ ಮುಂದಾಗಿರುವುದು ಉತ್ತಮ ನಿರ್ಧಾರ ಎಂದಿದ್ದಾರೆ.

    ಇನ್ನು ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ ಗಳನ್ನು ಸ್ಥಾಪನೆ, 450 ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣ ಖರೀದಿ.
    ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಜಿಲ್ಲೆಯ ತಳಕಲ್ ನಲ್ಲಿ ಜಿಟಿಟಿಸಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ ಹಾಗೂ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರದ ಘೋಷಣೆ ಮಾಡಿರುವುದಕ್ಕೆ ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts