More

  ಆರೋಗ್ಯ ಕೇಂದ್ರಗಳನ್ನು ಸುಧಾರಿಸಿ

  ಕೊಪ್ಪಳ: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಕಡಿಮೆ ಪ್ರಗತಿ ಸಾಧಿಸಿದ ಆರೋಗ್ಯ ಕೇಂದ್ರಗಳಲ್ಲಿ ಸುಧಾರಣೆ ತರುವಂತೆ ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

  ನಗರದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಗುರುವಾರ ವೈದ್ಯಾಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

  ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಕಡಿಮೆ ಪ್ರಗತಿ ಸಾಧಿಸಿದ ಅರೋಗ್ಯ ಕೇಂದ್ರ ಗುರುತಿಸಿ. ನೂನ್ಯತೆಗಳನ್ನು ಸರಿಪಡಿಸಿ ಪ್ರಗತಿ ಸಾಧಿಸಿ. ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಉಪಕೇಂದ್ರಗಳ ಕಾಮಗಾರಿ ನಿಲ್ಲದಿರಲಿ. ಕಟ್ಟಡ ಹಾಗೂ ಚಿಕಿತ್ಸಾ ಉಪಕರಣಗಳಿಗೆ ಅನುದಾನ ಅಗತ್ಯ ಇದ್ದಲ್ಲಿ ಜಿಪಂ ಅನುದಾನ ಬಳಸಿಕೊಳ್ಳಿ. ಒಟ್ಟಿನಲ್ಲಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡಿ. ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದರು.

  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ., ಜಿಲ್ಲಾ ಮಟ್ಟದ ವಿವಿಧ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts