ಪ್ರೌಢಶಾಲಾ ಮೈದಾನದಲ್ಲಿ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ

krede
Published on

ವಿಜಯವಾಣಿ ಸುದ್ದಿಜಾಲ ಕೊಕ್ಕರ್ಣೆ

ಕುಡುಬಿ ಸಮಾಜೋದ್ಧಾರಕ ಸಂಘ ಅಲ್ತಾರು ಯಡ್ತಾಡಿ, ಜಿಲ್ಲಾ ಕುಡುಬಿ ಯುವ ಸಂಘಟನೆ ಮತ್ತು ಜಿಲ್ಲಾ ಕುಡುಬಿ ಉಪಸಮಿತಿ ಆಶ್ರಯದಲ್ಲಿ ಜಿಲ್ಲಾ ಕುಡುಬಿ ಯುವ ಸಂಘಟನೆ ದಶಮಾನೋತ್ಸವ ಅಂಗವಾಗಿ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲಾ ಮೈದಾನದಲ್ಲಿ ಜರುಗಿತು.

ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಆನುವಂಶಿಕ ಆಡಳಿತ ಮೊಕ್ತೇಸರ ಎಚ್.ಧನಂಜಯ ಶೆಟ್ಟಿ ಉದ್ಘಾಟಿಸಿದರು. ಜಿಲ್ಲಾ ಕುಡುಬಿ ಯುವ ಸಂಘಟನೆ ಉಡುಪಿ ಜಿಲ್ಲೆ ಅಧ್ಯಕ್ಷ ವಿಘ್ನೇಶ್ ರಂಜಾಲು ಅಧ್ಯಕ್ಷತೆ ವಹಿಸಿದ್ದರು. ಶಾಸಕ ಕಿರಣ್‌ಕುಮಾರ್ ಕೊಡ್ಗಿ, ಜಿಪಂ ಮಾಜಿ ಸದಸ್ಯ ಪ್ರತಾಪ್ ಹೆಗ್ಡೆ ಮಾರಾಳಿ, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಕುಡುಬಿ ಸಮಾಜೋದ್ಧಾರಕ ಸಂಘ ಗೌರವಾಧ್ಯಕ್ಷ ಪ್ರಭಾಕರ ನಾಯ್ಕ ಕಲ್ಮರ್ಗಿ, ಕರ್ನಾಟಕ ರಾಜ್ಯ ಕುಡುಬಿ ಸಮಾಜ ಸಂಘ ಅಧ್ಯಕ್ಷ ಎಂ.ಕೆ.ನಾಯ್ಕ ಮಿಯಾರು, ಜಿಲ್ಲಾ ಕುಡುಬಿ ಕೂಡುಕಟ್ಟು ಒಕ್ಕೂಟ ಅಧ್ಯಕ್ಷ ವೈ.ಸುರೇಂದ್ರ ನಾಯ್ಕ ಯಳಂತೂರು, ಜಿಲ್ಲಾ ಕುಡುಬಿ ಶಿಕ್ಷಣ ಸಮಿತಿ ಅಧ್ಯಕ್ಷ ಎಚ್.ಬೆಳ್ಳ ನಾಯ್ಕ ಕೊಕ್ಕರ್ಣೆ, ಜಿಲ್ಲಾ ಕುಡುಬಿ ಮಹಿಳಾ ಸಂಘಟನೆ ಅಧ್ಯಕ್ಷೆ ಪಾರ್ವತಿ ಗೋಳಿಯಂಗಡಿ, ಕರ್ನಾಟಕ ರಾಜ್ಯ ಕುಡುಬಿ ಸಮಾಜ ಸಂಘ ಪ್ರಧಾನ ಕಾರ್ಯದರ್ಶಿ ನಾರಾಯಣ ನಾಯ್ಕ ಗೋಳಿಯಂಗಡಿ, ಲೋಕೋಪಯೋಗಿ ಇಲಾಖೆ ಅಭಿಯಂತ ಮಹಾಬಲ ನಾಯ್ಕ ಅಲ್ಬಾಡಿ, ಜಿಲ್ಲಾ ಕುಡುಬಿ ಯುವ ಸಂಘಟನೆ ಸ್ಥಾಪಕ ಅಧ್ಯಕ್ಷ ಕಾಳು ನಾಯ್ಕ ಎಲ್ಸಿಮನೆ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ನಾರಾಯಣ ಮಣೂರು, ಹೆಗ್ಗುಂಜೆ ಗ್ರಾಪಂ ಅಧ್ಯಕ್ಷ ರಾಮಕೃಷ್ಣ ಮಂದಾರ್ತಿ, ಬೆಳ್ವೆ ಗ್ರಾಪಂ ಅಧ್ಯಕ್ಷೆ ರಾಧಾ ಹಳನೀರು ಮತ್ತಿತರರು ಉಪಸ್ಥಿತರಿದ್ದರು.

ಸಾಧಕ ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮ ಜರುಗಿತು. ನರಸಿಂಹ ನಾಯ್ಕ ಮಂದಾರ್ತಿ ಸ್ವಾಗತಿಸಿದರು. ಶಿಕ್ಷಕರಾದ ಸತೀಶ್ಚಂದ್ರ ಶೆಟ್ಟಿ, ಶ್ರೀಕಾಂತ್ ನಿರೂಪಿಸಿದರು. ಜಗನ್ನಾಥ ಕಲ್ಮರ್ಗಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net