ಬೆಳ್ತಂಗಡಿಯಲ್ಲಿ ಜಿಲ್ಲಾಮಟ್ಟದ ಚೆಸ್ ಪಂದ್ಯಾಟ

Bel_Chess
Published on

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾಮಟ್ಟದ ಚೆಸ್ ಪಂದ್ಯಾಟ ಶನಿವಾರ ನಡೆಯಿತು.

ಪಂದ್ಯಾಟವನ್ನು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಭುವನೇಶ್ ಉದ್ಘಾಟಿಸಿದರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಸುಜಯ, ತಾಲೂಕು ಶಿಕ್ಷಣ ಸಂಯೋಜಕಿ ಚೇತನಾಕ್ಷಿ, ಎಸ್‌ಡಿಎಂ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಳ್ತಂಗಡಿ ಅಧ್ಯಕ್ಷ ಕೃಷ್ಣಾನಂದ ರಾವ್, ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ರವಿರಾಜ್ ಗೌಡ ಹಾಗೂ ಉಪಾಧ್ಯಕ್ಷ ಪಂಚಾಕ್ಷರಪ್ಪ, ಎಸ್‌ಡಿಎಂ ಬೆಳ್ತಂಗಡಿ ಮುಖ್ಯಶಿಕ್ಷಕಿ ಹೇಮಲತಾ ಎಂ. ಆರ್.ಉಪಸ್ಥಿತರಿದ್ದರು.

ಅಂತಾರಾಷ್ಟ್ರೀಯ ಚೆಸ್ ಆಟಗಾರ ಶಾಬ್ದಿಕ್ ವರ್ಮಾ ಅವರನ್ನು ಸನ್ಮಾನಿಸಲಾಯಿತು. ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾ ಕೇಸರಿ ಸ್ವಾಗತಿಸಿ. ಗೇರುಕಟ್ಟೆ ಶಾಲೆ ದೈಹಿಕ ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ನಿರೂಪಿಸಿ, ಎಸ್‌ಡಿಎಂ ಬೆಳ್ತಂಗಡಿಯ ಶಿಕ್ಷಕ ಶ್ರೇಯಾಂಸ್ ಜೈನ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net