

ಉಡುಪಿ: ಜಿಲ್ಲಾ ಅಮೆಚ್ಯುರ್ ಅಥ್ಲೆಟಿಕ್ ಅಸೋಸಿಯೇಶನ್ ವತಿಯಿಂದ ಜಿಲ್ಲಾ ಕಿರಿಯರ ಕ್ರೀಡಾಕೂಟ ಶನಿವಾರ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು.
ಶಾಸಕ ಯಶ್ಪಾಲ್ ಸುವರ್ಣ ಕ್ರೀಡಾಕೂಟ ಉದ್ಘಾಟಿಸಿದರು. ಜಿಲ್ಲಾ ಅಮೆಚ್ಯುರ್ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಣಿಪಾಲ ವಿಕೆ ಗ್ರೂಪ್ ಅಧ್ಯಕ್ಷ ಕೆ.ಎಂ.ಶೆಟ್ಟಿ, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್ನ ಉಪಾಧ್ಯಕ್ಷ ಮಹೇಶ್ ಠಾಕೂರು, ಲಯನ್ಸ್ ಜಿಲ್ಲಾ ಗವರ್ನರ್ ಸ್ವಪ್ನಾ ಸುರೇಶ್, ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮುಖ್ಯ ಅತಿಥಿಗಳಾಗಿದ್ದರು. ತಾಲೂಕು ಗ್ಯಾರಂಟಿ ಅನುಫಿ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಉಡುಪಿ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಸೋಜನ್ ಕೆ.ಜಿ., ಅಸೋಸಿಯೇಶನ್ ಕೋಶಾಧಿಕಾರಿ ನಾರಾಯಣ ಪ್ರಭು ಉಪಸ್ಥಿತರಿದ್ದರು.
ಅಸೋಸಿಯೇಶನ್ ಕಾರ್ಯದರ್ಶಿ ದಿನೇಶ್ ಕುಮಾರ್ ಎ. ಸ್ವಾಗತಿಸಿದರು. ರಾಮಚಂದ್ರ ಪಾಟ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಕಾಂತ್ ಸಾಮಂತ್ ಕಾರ್ಯಕ್ರಮ ನಿರೂಪಿಸಿದರು.