ಕ್ರೀಡೆಗಳು ವ್ಯಕ್ತಿತ್ವ ವಿಕಸನಕ್ಕೆ ರಹದಾರಿ : ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ

New Project (14)
Published on

ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ

ಭಾರತೀಯ ಪರಂಪರಾಗತವಾದ ಕಬಡ್ಡಿ ಮತ್ತು ಖೋ ಖೋ ಕ್ರೀಡೆಗಳು ಮಾನವನ ವ್ಯಕ್ತಿತ್ವ ವಿಕಸನಕ್ಕೆ ರಹದಾರಿಯಾಗುತ್ತವೆ ಎಂದು ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ದ.ಕ. ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಆಶ್ರಯದಲ್ಲಿ ಗುರುವಾರ ಬಿಳಿನೆಲೆ ಶಾಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ 14ರ ಮತ್ತು 17ರ ವಯೋಮಾನದ ಬಾಲಕ- ಬಾಲಕಿಯರ ಖೋ ಖೋ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಕಡಬ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಬಿಳಿನೆಲೆ ಗ್ರಾಪಂ ಅಧ್ಯಕ್ಷೆ ಶಾರದಾ ದಿನೇಶ್, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುವನೇಶ್ವರ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ, ಬೈಲು ಶಾಲೆಯ ಮುಖ್ಯ ಗುರು ಶಾರದಾ ಮುಖ್ಯ ಅತಿಥಿಗಳಾಗಿದ್ದರು.

ಶಾಲಾಡಳಿತ ಮಂಡಳಿ ಉಪಾಧ್ಯಕ್ಷ ವೇಣುಗೋಪಾಲ ಶಾಸ್ತ್ರಿ, ಕಾರ್ಯದರ್ಶಿ ಶ್ರೀಕೃಷ್ಣ ಶರ್ಮ, ನಿವೃತ್ತ ಮುಖ್ಯಗುರುಗಳಾದ ಗೋಪಾಲಕೃಷ್ಣ ಬಿ., ನಿವೃತ್ತ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಶಾರದಾ ಬಿಳಿನೆಲೆ, ಕ್ರೀಡಾ ಸಂಯೋಜಕ ವಿನಯ ಕೆ., ವೇದವ್ಯಾಸ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ಎ.ಕೇಶವ, ಗೋಪಾಲಕೃಷ್ಣ ಪ್ರೌಢಶಾಲಾ ಪಿಟಿಎ ಅಧ್ಯಕ್ಷ ಮೋಹನ ಗೌಡ, ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಬೈಲು, ಗೋಪಾಲಕೃಷ್ಣ ಪ್ರೌಢಶಾಲೆ ಮುಖ್ಯಗುರು ಸತ್ಯಶಂಕರ ಭಟ್, ವೇದವ್ಯಾಸ ವಿದ್ಯಾಲಯದ ಮುಖ್ಯಶಿಕ್ಷಕ ಪ್ರಶಾಂತ್ ಬಿ. ಉಪಸ್ಥಿತರಿದ್ದರು.

ದೇಶೀಯ ಕ್ರೀಡೆಗಳು ದೈಹಿಕ ಕ್ಷಮತೆ ವೃದ್ಧಿಯೊಂದಿಗೆ ಉತ್ತಮ ಹೆಸರು ತಂದುಕೊಡುತ್ತವೆ. ಸ್ಪರ್ಧಾತ್ಮಕ ಮನೋಭಾವದಿಂದ ಕ್ರೀಡಾ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಕ್ರೀಡೆ ಬುನಾದಿ ನೀಡುತ್ತದೆ. ಸೋಲು ಗೆಲುವನ್ನು ಸಮಾನ ಸ್ವೀಕರಿಸುವ ಮನಸ್ಥಿತಿಯನ್ನು ಕ್ರೀಡಾಳುಗಳು ಬೆಳೆಸಿಕೊಳ್ಳಬೇಕು. ಇದು ಕ್ರೀಡಾ ಸಾಧನೆಗೆ ಸ್ಫೂರ್ತಿ ನೀಡುತ್ತದೆ. ಕಷ್ಟ, ಪರಿಶ್ರಮದಿಂದ ಆಟಗಾರರು ಸಾಧನೆ ಮೆರೆಯಬೇಕು. ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net